ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹುಬ್ಬಳ್ಳಿಯ ನೇಹಾ ಹಿರೇಮಠ್ #Hubli Neha Hiremutt ಅವರ ಹತ್ಯೆ ವಿರೋಧಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #K S Eshwarappa ಅವರ ನೇತೃತ್ವದಲ್ಲಿ ಇಂದು ರಾಷ್ಟ್ರಭಕ್ತರ ಬಳಗದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣ ಗೆ ನಡೆಸಿ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ದೈವಜ್ಞ ಕಲ್ಯಾಣಮಂದಿರದಿಂದ ಹೊರಟ ಪ್ರತಿಭಟನಾ ಮೆರವವಣಿಯು ದುರ್ಗಿಗುಡಿ ಮೂಲಕ ಸಾಗಿ ಗೋಪಿವೃತ್ತದ ಮೂಲಕ ಮಹಾವೀರ ವೃತ್ತ ಸೇರಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನಾ ಸಭೆ ನಡೆಸಿದರು.

ಮಾಜಿ ಮೇಯರ್ ಸುವರ್ಣಾ ಶಂಕರ್ ಮಾತನಾಡಿ, ಇದೊಂದು ಬರ್ಬರ ಕೃತ್ಯ. ಹಿಂದೂಗಳು ಅದರಲ್ಲೂ ಹೆಣ್ಣುಮಕ್ಕಳು ಕಾಲೇಜಿಗೆ ಹೋಗುವುದೇ ಕಷ್ಟವಾಗುತ್ತಿದೆ. ತಮ್ಮನ್ನು ತಾವು ರಕ್ಷಣೆ ಮಾಡಿಕೊಳ್ಳುವುದೇ ಕಷ್ಟವಾಗಿರುವಾಗಿದೆ. ಈ ಘಟನೆ ಬಗ್ಗೆ ಕಾಂಗ್ರೆಸ್ ಸರ್ಕಾರ ಇದೊಂದು ವೈಯಕ್ತಿಕ ವಿಷಯ ಎಂದು ಹೇಳಿರುವುದು ನಾಚಿಕೆಗೇಡಿನದ್ದು ಎಂದರು.

ಪದೇ ಪದೇ ಹಿಂದೂಗಳ ಮೇಲೆ ಹಲ್ಲೆಯಾಗುತ್ತಿರುವುದನ್ನು ಪ್ರತಿಭಟನಾಕಾರರು ತೀವ್ರವವಾಗಿ ಖಂಡಿಸಿದರು. ಲವ್ ಜಿಹಾದ್ ಹೆಸರಲ್ಲಿ ಹಿಂದೂ ಹೆಣ್ಣುಮಕ್ಕಳು ಕೊಲೆಯಾಗುತ್ತಿರುವುದು ಅತ್ಯಂತ ಅಪಾಯಕಾರಿಯಾಗಿದೆ. ಅನೇಕ ಘಟನೆಗಳು ಇತ್ತೀಚಿಗೆ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಸಂಭವಿಸಿವೆ. ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ. ಕಾನೂನು ವ್ಯವಸ್ಥೆ ಹದಗೆಟ್ಟಿದೆ. ಘಟನೆಯನ್ನು ಯಾವುದೇ ಕಾರಣಕ್ಕೂ ಮುಚ್ಚಿ ಹಾಕಬಾರದು. ಇಂತಹ ಹತ್ಯೆಕೋರರಿಗೆ ಶೀಘ್ರ ಮತ್ತು ಕಠಿಣ ಶಿಕ್ಷೆಯಾಗುವಂತಹ ಕಾನೂನನ್ನು ಜಾರಿಗೆ ತರಬೇಕಾದ ಅವಶ್ಯಕತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post