ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಮಹಾನಗರಪಾಲಿಕೆಗಳ ಅಧಿಕಾರಿಗಳ ಮತ್ತು ನೌಕರರ ಸಂಘ ಶಿವಮೊಗ್ಗ ಮಹಾನಗರಪಾಲಿಕೆ ಘಟಕದ ಅಧ್ಯಕ್ಷರಾಗಿ ಎನ್. ಗೋವಿಂದ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಒಳಚರಂಡಿ ವಿಭಾಗದ ಸೂಪರ್ ವೈಸರ್ ಆಗಿರುವ ಎನ್. ಗೋವಿಂದ ಅವರು ಇದುವರೆಗೂ ಶಿವಮೊಗ್ಗ ಮಹಾನಗರಪಾಲಿಕೆ ಅಧಿಕಾರಿಗಳ ಮತ್ತು ನೌಕರರ( ಪೌರಕಾರ್ಮಿಕರ) ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಪೌರ ಕಾರ್ಮಿಕರ ಹಿತರಕ್ಷಣೆಗಾಗಿ ಬದ್ದತೆಯಿಂದ ಕಾರ್ಯನಿರ್ವಹಿಸುತ್ತಾ ಬಂದಿದ್ದರು.
Also read: ಜ.12ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ
ಪೌರಕಾರ್ಮಿಕರಿಗೆ ವಸತಿಯೋಜನೆ, ಸಮಯದಾಯಭವನ , ಪೌರಕಾರ್ಮಿಕರ ಮಕ್ಕಳ ಮದುವೆಗೆ ನೆರವಾಗುವ ಯೋಜನೆ ಸೇರಿದಂತೆ ಅನೇಕ ಕಾರ್ಯಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಎನ್. ಗೋವಿಂದ ಅವರು ಮಹತ್ತರ ಪಾತ್ರ ವಹಿಸಿದ್ದರು.
ನೆನ್ನೆ ನಡೆದ ಸಂಘದ ಸಭೆಯಲ್ಲಿ ನೂತನ ಅಧ್ಯಕ್ಷರನ್ನಾಗಿ ಎನ್. ಗೋವಿಂದ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post