ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಮುದಾಯದ ಸಂಘಟನೆಗಳು, ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠ ಇವರ ಸಂಯುಕ್ತಾಶ್ರಯದಲ್ಲಿ ಜೂ.27ರಂದು ಬೆಳಿಗ್ಗೆ 11ಕ್ಕೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು #Kempegowda Jayanthi ಆಚರಿಸಲಾಗುವುದು ಎಂದು ಒಕ್ಕಲಿಗರ ಸಮುದಾಯದ ಮುಖಂಡ ಹಾಗೂ ಜಿಲ್ಲಾ ಕಸಾಪ ಅಧ್ಯಕ್ಷ ಡಿ. ಮಂಜುನಾಥ ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಒಕ್ಕಲಿಗರ ಸಮುದಾಯದ ಎಲ್ಲಾ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕೆಂಪೇಗೌಡರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ ಹಾಗೂ ಮಠದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರ ಆಶೀರ್ವಾದ ದೊಂದಿಗೆ ಮಠದ ಪ್ರಧಾನ ಕಾರ್ಯದರ್ಶಿ ಶ್ರೀಪ್ರಸನ್ನನಾಥ ಮಹಾಸ್ವಾಮೀಜಿಯವರ ದಿವ್ಯಸಾನಿಧ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮಕ್ಕೂ ಮೊದಲು ಬೆಳಿಗ್ಗೆ 10ಕ್ಕೆ ಎಂಆರ್‍ಎಸ್ ಸರ್ಕಲ್‍ನಿಂದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದವರೆಗೆ ಬೈಕ್ ಮತ್ತು ಕಾರ್ ರ್ಯಾಲಿಯನ್ನು ಆಯೋಜಿಸಲಾಗಿದೆ. ಈ ರ್ಯಾಲಿಯಲ್ಲಿ ಶಿವಮೊಗ್ಗ ನಗರ ಹಾಗೂ ಸುತ್ತಮುತ್ತಲಿನ ಎಲ್ಲಾ ಊರುಗಳಿಂದ ಸಮಾಜ ಬಾಂಧವರು ರ್ಯಾಲಿಯಲ್ಲಿ ಭಾಗವಹಿಸಲಿರುವರು ಎಂದರು.
ಇದೇ ಸಂದರ್ಭದಲ್ಲಿ ಸಮುದಾಯದ ಎಸ್‍ಎಸ್‍ಎಲ್‍ಸಿಯಲ್ಲಿ 610ಕ್ಕೂ ಹಾಗೂ ಪಿಯುಸಿಯಲ್ಲಿ 580ಕ್ಕೂ ಮೇಲ್ಪಟ್ಟು ಅಂಕ ಗಳಿಸಿದ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ರ್ಯಾಂಕ್ ಪಡೆದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧುಬಂಗಾರಪ್ಪ, ಸಚಿವ ಎಸ್. ಶಿವರಾಜ್ ತಂಗಡಗಿ, ಸಂಸದ ಬಿ.ವೈ.ರಾಘವೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಬಿ.ಕೆ.ಸಂಗಮೇಶ್, ಬೇಲೂರು ಗೋಪಾಲಕೃಷ್ಣ, ಅರಗಜ್ಞಾನೇಂದ್ರ, ಶಾರದ ಪೂರ್ಯಾನಾಯ್ಕ್, ಬಿ.ವೈ.ವಿಜಯೇಂದ್ರ, ಎಸ್.ಎಲ್.ಬೋಜೇಗೌಡ, ಭಾರತಿ ಶೆಟ್ಟಿ, ಡಿ.ಎಸ್.ಅರುಣ್, ಧನಂಜಯ ಸರ್ಜಿ, ಬಲ್ಕೀಶ್‍ಬಾನು ಮುಂತಾದವರು ಭಾಗವಹಿಸುವರು ಮತ್ತು ನೂತನವಾಗಿ ಆಯ್ಕೆಯಾದ ಶಾಸಕರು ಹಾಗೂ ಸಂಸದರಿಗೆ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರನ್ನು ಸನ್ಮಾನಿಸಲಾಗುವುದು ಎಂದರು.
Also read: ಕೆಟ್ಟ ಜಾಹೀರಾತು ನೋಡಿ ದುಶ್ಚಟಕ್ಕೆ ದಾಸರಾಗಬೇಡಿ : ಡಾ.ನಾಗೇಂದ್ರ ಕರೆ
ಇವರ ಜೊತೆಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರಾದ ಪಲ್ಲವಿ ಜಿ., ರವಿಕುಮಾರ್, ಆರ್.ಎಂ.ಮಂಜುನಾಥಗೌಡ, ಡಾ.ಅಂಶುಮಂತ್, ಎಚ್.ಎಸ್.ಸುಂದರೇಶ್, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಬಿ.ಆದಿಮೂರ್ತಿ ಸೇರಿದಂತೆ ಹಲವರು ಉಪಸ್ಥಿತರಿರುವರು, ಡಾ.ಕೆ.ವಿ.ಗಿರಿಧರ್ ಉಪನ್ಯಾಸ ನೀಡುವರು ಎಂದರು.
ಜಿಲ್ಲಾಧ್ಯಕ್ಷ ಹೆಚ್.ಬಿ.ಆದಿಮೂರ್ತಿ ಮಾತನಾಡಿ, ಕೆಂಪೇಗೌಡ ಜಯಂತಿಯ ಅಂಗವಾಗಿ ನಾಳೆ ನಗರ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳಿಗೆ ನಾಡಪ್ರಭು ಕೆಂಪೇಗೌಡರ ಕುರಿತು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಶಾಂತಸುರೇಂದ್ರ, ಭಾರತಿ ರಾಮಕೃಷ್ಣ, ರಘುರಾಜ್, ಪ್ರತೀಮಾ ಡಾಕಪ್ಪ ಗೌಡ, ನಾಗರಾಜ್, ಶಂಕರಣ್ಣ, ಸುಮಿತ್ರ ಕೇಶವಮೂರ್ತಿ, ರಮೇಶ್, ರಾಜಣ್ಣ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post