ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಜೇಯ ಸಂಸ್ಕೃತಿ ಬಳಗ ಹಾಗೂ ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮೇ 22ರಂದು ನಾರಾಯಣ ಸ್ಮರಣೆ ಕಾರ್ಯಕ್ರಮದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರದ ಕುವೆಂಪು ರಂಗಮಂದಿರದಲ್ಲಿ ಬೆಳಿಗ್ಗೆ 10ಗಂಟೆಗೆ ಭಜನಾ ಪರಿಷತ್ ಹಾಗೂ ದಾಸ ಸಾಹಿತ್ಯ ಪ್ರಾಜೆಕ್ಟ್ ಸಹಕಾರದೊಂದಿಗೆ ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿ ನೇತೃತ್ವದಲ್ಲಿ ಶ್ರೀವಿಷ್ಣುಸಹಸ್ರನಾಮ ಪಾರಾಯಣ ಹಾಗೂ ವ್ಯಾಖ್ಯಾನ ನಡೆಯಲಿದ್ದು, ಶಾಸಕ ಈಶ್ವರಪ್ಪ ಉಪಸ್ಥಿತರಿರಲಿದ್ದಾರೆ.
ಸಂಜೆ 6ಗಂಟೆಗೆ ಬಹುಶ್ರುತ ವಿದ್ವಾಂಸ, ಪ್ರಕಾಂಡ ಪಂಡಿತರಾಗಿದ್ದ ಡಾ. ಕೆ.ಎಸ್. ನಾರಾಯಣಚಾರ್ಯ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಇಂಧನ ಸಚಿವ ವಿ. ಸುನೀಲ್ ಕುಮಾರ್, ಎಸ್. ದತ್ತಾತ್ರಿ, ಎಂ.ಎ. ಸುಬ್ರಹ್ಮಣ್ಯ, ಅಜೇಯ ಸಂಸ್ಕೃತಿ ಬಳಗ ಅಧ್ಯಕ್ಷ ಜೆ. ರಾಮಾಚಾರ್, ವಿಪ್ರ ನೌಕರರ ಕ್ಷೇಮಾಭಿವೃದ್ಧ ಸಂಘದ ಅಧ್ಯಕ್ಷ ಹೆಚ್.ಕೆ. ಕೇಶವಮೂರ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Also read: ತೆಲಂಗಾಣ, ಲಕ್ಷದ್ವೀಪ್ ರಾಜ್ಯ ಎಐಸಿಸಿ ಸಂಯೋಜಕರಾಗಿ ಪರಶುರಾಮ್ ನೇಮಕ
ಹೆಚ್ಚಿನ ಮಾಹಿತಿಗಾಗಿ ಆರ್. ಅಚ್ಯುತರಾವ್, ಮೊ: 9448458457ಗೆ ಸಂಪರ್ಕಿಸಬಹುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post