No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆ ಐತಿಹಾಸಿಕ ಹೆಜ್ಜೆ: ಸಂಸದ ರಾಘವೇಂದ್ರ

kalpa News by kalpa News
April 15, 2026
in ಶಿವಮೊಗ್ಗ
0
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಸಂಸತ್ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ನೀಡುವ ನಾರೀಶಕ್ತಿವಂದನಾ ಅಧಿನಿಯಮ (ಮಹಿಳಾ ಮೀಸಲಾತಿ) ಕಾಯ್ದೆಯು Nari Shakti Vandana Act ಐತಿಹಾಸಿಕ ಹೆಜ್ಜೆಯಾಗಿದ್ದು, ಈ ನಿರ್ಧಾರಕ್ಕಾಗಿ ಪ್ರಧಾನಿ ಮೋದಿಯವರಿಗೆ PM Modi ಕೃತಜ್ಞತೆಗಳು ಎಂದು ಸಂಸದ ಬಿ.ವೈ. ರಾಘವೇಂದ್ರ MP B Y Raghavendra ಹೇಳಿದರು.

ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಹು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಮಹಿಳಾ ಮೀಸಲಾತಿಯ ಮೂಲ ಕಾನೂನಿಗೆ ತಿದ್ದುಪಡಿ ತಂದು 2011ರ ಜನಗಣತಿಯ ಆಧಾರದಲ್ಲಿ ಕ್ಷೇತ್ರ ಮರುವಿಂಗಡಣೆ ಮಾಡಿ ಮಹಿಳಾ ಮೀಸಲಾತಿಯ ಕಾನೂನನ್ನು ಜಾರಿಗೆ ತರಲಾಗುವುದು. ಈಗಾಗಲೇ ಕರಡು ಪ್ರತಿ ಸಿದ್ಧವಾಗಿದ್ದು, ನಾಳೆಯಿಂದ ಮೂರು ದಿನಗಳ ಕಾಲ ವಿಶೇಷ ಸಂಸತ್ ಅಧಿವೇಶನ ನಡೆಯಲಿದ್ದು, ಅಲ್ಲಿ ನಾರೀಶಕ್ತಿ ವಂದನಾ ಅಧಿನಿಯಮವನ್ನು ಜಾರಿಗೆ ತರಲಾಗುವುದು ಎಂದರು.
ಈ ಮಹಿಳಾ ಮೀಸಲಾತಿಯು ಭಾರತದ ಅರ್ಧನಾರೀಶ್ವರ ಕಲ್ಪನೆಯನ್ನು ಹೊಂದಿದ್ದು, ಮಹಿಳಾ ಶಕ್ತಿಯನ್ನು ಗೌರವಿಸುವ ಕ್ರಮವಾಗಿದೆ. ಏ.20ರಂದು ಬಸವಜಯಂತಿಯೂ ಕೂಡಾ ಇದ್ದು, ಬಸವಣ್ಣನವರ ಸಾಮಾಜಿಕ ನ್ಯಾಯದ ಸಮ ಸಮಾಜದ ಮಹಿಳೆಯರಿಗೂ ಸಮಾನತೆ ನೀಡುವ ಕಲ್ಪನೆಯೂ ಇದಾಗಿದ್ದು, ಇದು ಕೇವಲ ಕಾಯ್ದೆಯಾಗಿ ಉಳಿಯುವುದಿಲ್ಲ ಮಹಿಳೆಯರಿಗೆ ನೀಡುವ ಅತ್ಯಂತ ಗೌರವವಾಗಿದೆ ಮತ್ತು ಇದೊಂದು ಹೊಸ ಮೈಲಿಗಲ್ಲಾಗಿದ್ದು, ಐತಿಹಾಸಿಕ ಹೆಜ್ಜೆಯಾಗಿದೆ ಎಂದರು.

ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ದಶಕಗಳ ಕಾಲ ಹೋರಾಟ ನಡೆಸಿದ್ದರು. ಇದೀಗ ಈ ಹೋರಾಟಕ್ಕೆ ಮೋದಿ ಸರ್ಕಾರದಲ್ಲಿ ಜಯ ಸಿಕ್ಕಂತಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇದು ಜಾರಿಯಾಗಲಿದೆ. ಜನಸಂಖ್ಯೆ ಮತ್ತು ಭೌಗೋಳಿಕ ಪ್ರದೇಶದ ಆಧಾರದಲ್ಲಿ ಲೋಕಸಭಾ ಸದಸ್ಯರ ಸಂಖ್ಯೆ 543ರಿಂದ 850ಕ್ಕೆ ಏರಲಿದ್ದು, ಇದರಲ್ಲಿ ಸುಮಾರು 270 ಸ್ಥಾನಗಳು ಮಹಿಳೆಯರ ಪಾಲಾಗಲಿದೆ. ಇದೊಂದು ಸಂವಿಧಾನ ಬದ್ಧ ಅವಕಾಶವಾಗಿದೆ. ನಾನು ಸಂಸದನಾಗಿ ಹಲವು ವಿಶಿಷ್ಟ ಸಂದರ್ಭಗಳಲ್ಲಿ ಕೆಲಸ ಮಾಡಿದ ಹೆಮ್ಮೆ ನನಗಿದೆ. ಕಾಶ್ಮೀರ ಕಾಯ್ದೆ, ಜಿಎಸ್‍ಟಿ ಹೀಗೆ ಹಲವು ಅತ್ಯುತ್ತಮ ಸಂದರ್ಭಗಳಿಗೆ ಸಂಸದನಾಗಿದ್ದು, ನನಗೆ ಹೆಮ್ಮೆ ತಂದಿದೆ ಎಂದರು.
ನಾಳೆಯಿಂದ ನಡೆಯುವ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದು, ಈ ಐತಿಹಾಸಿಕ ಮಹಿಳಾ ಮೀಸಲಾತಿಯ ಚರ್ಚೆಯಲ್ಲಿ ನಾನೂ ಕೂಡಾ ಭಾಗವಹಿಸುತ್ತಿದ್ದೇನೆ. ಇದಕ್ಕಾಗಿ ನಾನು ಶಿವಮೊಗ್ಗ ಕ್ಷೇತ್ರದ ಎಲ್ಲಾ ಮಹಿಳೆಯರಿಗೆ ವಿಶೇಷವಾದ ಕೃತಜ್ಞತೆ ಸಲ್ಲಿಸುತ್ತಿದ್ದೇನೆ. ಕೆಲವು ಆರೋಪಿಸಿದಂತೆ ಇದು ಚುನಾವಣೆಯ ಗಿಮಿಕ್ ಅಂತೂ ಅಲ್ಲ ಎಂದರು.

ಮೇ.1 ರಿಂದ ಸ್ಥಗಿತಗೊಳ್ಳಲಿರುವ ಇಂಡಿಗೋ ವಿಮಾನ ಸೇವೆಯನ್ನು ಉಳಿಸಿಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ. ಹಾಗೆಯೇ ಕೋಟೆಗಂಗೂರಿನಲ್ಲಿ ರೈಲ್ವೆ ಟರ್ಮಿನಲ್ ಕಾಮಗಾರಿ ಪ್ರಗತಿಯಲ್ಲಿದೆ. ಇದಕ್ಕಾಗಿ ಜಾಗ ನೀಡಿದ ರೈತರಿಗೆ ಪರಿಹಾರ ಕೂಡಾ ನೀಡಬೇಕಾಗಿದೆ. ಈಗಾಗಲೇ ರಾಜ್ಯ ಸರ್ಕಾರಕ್ಕೆ ಇದನ್ನು ಮನವರಿಕೆ ಮಾಡಿಕೊಡಲಾಗಿದೆ. ಇನ್ನು ಮೂರು ತಿಂಗಳೊಳಗೆ ಬಾಕಿ ಕೆಲಸ ಮುಗಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದೇ ಸಂದರ್ಭದಲ್ಲಿ ನಾರೀಶಕ್ತಿ ವಂದನಾ ಅಧಿನಿಯಮ ಜಾರಿಗಾಗಿ ಶ್ರಮಿಸಿದ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ.ಜಗದೀಶ್, ಪ್ರಮುಖರಾದ ಮಾಲತೇಶ್, ಶಿವರಾಜ್, ಎಸ್.ಚಂದ್ರಶೇಖರ್, ಮಹಿಳಾ ಮೋರ್ಚಾದ ಪ್ರಮುಖರಾದ ಮಧುರಾ ಶಿವಾನಂದ್, ಗಾಯತ್ರಿ ದೇವಿ, ಪದ್ಮಿನಿ, ಸುರೇಖಾ ಮುರಳೀಧರ್, ಸರಸ್ವತಿ, ಮಂಗಳಾ ನಾಗೇಂದ್ರ, ಮಂಜುಳಾ ಭದ್ರಾವತಿ, ರಶ್ಮಿ, ಶಿಲ್ಪಾ, ಮೈತ್ರಿ ಪಟೇಲ್, ಸುಮಲತಾ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNari Shakti Vandana ActNews in KannadaNews KannadaPM ModiShimogaShivamoggaNewsನಾರೀಶಕ್ತಿವಂದನಾ ಅಧಿನಿಯಮ ಕಾಯ್ದೆಪ್ರಧಾನಿ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮಂಡ್ಯ | ಆದಿಚುಂಚನಗಿರಿ ಮಠಕ್ಕೆ ಪ್ರಧಾನಿ ಮೋದಿ ಭೇಟಿ, ಶ್ರೀ ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆ

Next Post

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

kalpa News

kalpa News

Next Post
ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

ಬಿಎಫ್‌ಸಿ vs ಈಸ್ಟ್ ಬೆಂಗಾಲ್: ಹೈ-ವೋಲ್ಟೇಜ್ ಪಂದ್ಯಕ್ಕೆ ಕೌಂಟ್‌ಡೌನ್

Leave a Reply Cancel reply

Your email address will not be published. Required fields are marked *

No Result
View All Result
SWR to run special trains for Good Friday, Easter rush
English Articles

Indian Railway | Danapur and Bengaluru Special Trains Extension

by kalpa News
July 16, 2026
0

Kalpa Media House  |  Hubballi  | East Central Railway (Indian Railway) has notified the extension of the running of Train...

Read moreDetails
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
SWR to run special trains for Good Friday, Easter rush

Londa Yard Works: Partial Cancellation and Delay of Several Trains

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL