No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಾಷ್ಟ್ರೀಯ ಶಿಕ್ಷಣ ನೀತಿ: ಕಿಮ್ಮನೆ ರತ್ನಾಕರ್ ಅವರ ಹೇಳಿಕೆಗಳು ರಾಜಕೀಯ ಪ್ರೇರಿತ – ಎಸ್ ದತ್ತಾತ್ರಿ ಖಂಡನೆ

kalpa News by kalpa News
September 14, 2021
in ಶಿವಮೊಗ್ಗ
0
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಶಿಕ್ಷಣ ನೀತಿ ಜಾರಿಗೆ ತರಲು ಕಸ್ತೂರಿ ರಂಗನ್‌ನಂತಹ ವಿಜ್ಞಾನಿಗಳನ್ನು ನೇಮಿಸಲಾಗಿತ್ತು, ಹಾಗೂ ಸನಾತನ ವಿಷಯಗಳ ವಿಜೃಂಬಿಸುವ ಕೆಲಸ ಮಾಡಲಾಗಿದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ನೀಡಿರುವ ಹೇಳಿಕೆಯನ್ನು ಎಸ್. ದತ್ತಾತ್ರಿ ಖಂಡಿಸಿದ್ದಾರೆ.



ಶಿಕ್ಷಣಕ್ಕೊಂದು ನೂತನ ಸ್ವರೂಪ ನೀಡುವುದೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶ. ವಿದ್ಯಾರ್ಥಿಗಳ ಚಾರಿತ್ರ್ಯ ರೂಪಿಸುವ ಜೊತೆಗೆ ಆರ್ಥಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡುವಂತಹ ಸ್ವಾಭಿಮಾನಿ, ಸ್ವಾವಲಂಬಿ ಪೀಳಿಗೆಯನ್ನು ರೂಪಿಸುವುದೇ ಅದರ ಧ್ಯೇಯ. ಆ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) – 2020 ದೇಶದ ಶಿಕ್ಷಣ ವಲಯದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದೆ. ಏಕೆಂದರೆ ಶಿಕ್ಷಣದ ಮುಖ್ಯ ಗುರಿಯನ್ನು ಎನ್ಇಪಿ ತುಂಬಾ ಸ್ಪಷ್ಟವಾಗಿ ಗುರುತಿಸಿದೆ ಹಾಗೂ ಅದನ್ನು ಮುಟ್ಟಲು ವಾಸ್ತವಿಕ ಮಾರ್ಗವನ್ನು ಆಯ್ಕೆ ಮಾಡಿಕೊಂಡಿದೆ.

ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ. ವಿದ್ಯಾರ್ಥಿಯ ಉನ್ನತಿಯ ಉದ್ದೇಶವನ್ನು ಹೊರತುಪಡಿಸಿದರೆ, ಇನ್ಯಾವ ರಹಸ್ಯ ಕಾರ್ಯಸೂಚಿಯೂ ಇಲ್ಲದ ಸರ್ವಶ್ರೇಷ್ಠ ನೀತಿ ಇದು. 34 ವರ್ಷಗಳ ನಂತರ ಬಂದ ಏಕೈಕ ಶಿಕ್ಷಣ ನೀತಿಯ ಬಗ್ಗೆ, ಈಗ ಜನರಲ್ಲಿ ಅನಗತ್ಯ ಗೊಂದಲ ಉಂಟು ಮಾಡುವ ಕೆಲಸ, ಷಡ್ಯಂತ್ರ ನಡೆಯುತ್ತಿದೆ.


ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಅವರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ವಿರುದ್ಧ ಹೇಳಿಕೆಯನ್ನು ನೀಡಿದ್ದಾರೆ. ಯಾವುದೇ ಚರ್ಚೆ ಇಲ್ಲದೆ ತರಾತುರಿಯಾಗಿ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗಿದೆ ಎನ್ನುವ ಮೂಲಕ ಅವರು, ಶಿಕ್ಷಣದ ರಾಜಕಾರಣ ಮಾತನಾಡುತ್ತಿದ್ದಾರೆ. ನಿಜ ನಮ್ಮ ಸರ್ಕಾರ ಬೇರೆ ರಾಜ್ಯಗಳಿಗಿಂತ ಮೊದಲೇ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ತಂದಿದೆ. ನಮ್ಮ ಸರ್ಕಾರಕ್ಕೆ ಬದ್ಧತೆ ಇದೆ, ಉತ್ಸಾಹವಿದೆ, ಹೀಗಾಗಿ ಶಿಕ್ಷಣ ನೀತಿ ದೇಶದಲ್ಲೇ ಮೊದಲು ಜಾರಿಗೆ ಬಂದಿದೆ. ಹಾಗೂ ಸಾಕಷ್ಟು ತಯಾರಿ ಮಾಡಿಕೊಂಡು ಜಾರಿಗೆ ತರಲಾಗಿದೆ ಎಂದು ದತ್ತಾತ್ರಿ ವಿವರಿಸಿದ್ದಾರೆ.

ಕೇಂದ್ರದಲ್ಲಿ ಶಿಕ್ಷಣ ನೀತಿಯ ಕರಡು ರಚನಾ ಸಮಿತಿ ಇಡೀ ನೀತಿಯನ್ನು ಅಂತಿಮಗೊಳಿಸಿ 2019ರಲ್ಲಿ ರಾಜ್ಯಕ್ಕೆ ಕರಡು ಪ್ರತಿ ಕಳಿಸಿದಾಗಲೇ ಇಲ್ಲಿನ ಸರಕಾರ ಜಾಗೃತವಾಯಿತು. ಪ್ರಾಥಮಿಕ ಹಂತದಲ್ಲಿಯೇ ಕೂಲಂಕುಷ ಅಧ್ಯಯನ ಆಗಿ ನಂತರ 2020 ಮಾರ್ಚ್ ನಲ್ಲಿ ಶಿಕ್ಷಣ ನೀತಿಯ ಅನುಷ್ಠಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ ರಂಗನಾಥ್ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚಿಸಲಾಯಿತು.

2020 ರ ಜುಲೈನಲ್ಲಿ ಕೇಂದ್ರ ಸಂಪುಟ ನೀತಿಗೆ ಒಪ್ಪಿಗೆ ಕೊಟ್ಟಿತು. ಕೂಡಲೇ ನಮ್ಮ ಸರಕಾರ ಕಾರ್ಯೋನ್ಮುಖವಾಯಿತು. 2020 ಡಿಸೆಂಬರ್ ನಲ್ಲಿ ಕಾರ್ಯಪಡೆ ವರದಿ ಸಲ್ಲಿಸಿದ ಮೇಲೆ ಸಚಿವ ಸಂಪುಟ ಮತ್ತು ಮೇಲ್ಮನೆಯಲ್ಲೂ ಚರ್ಚೆ ನಡೆಯಿತು. ವಿಧಾನ ಪರಿಷತ್ ಸದಸ್ಯರಿಗೆ ಪ್ರಾತ್ಯಕ್ಷಿಕೆಯನ್ನು ನೀಡಲಾಗಿದೆ. ಎಲ್ಲಾ ವಿವಿಗಳ ಕುಲಪತಿಗಳ ಜೊತೆ ಸಮಾಲೋಚಿಸಲಾಗಿದೆ. ಇದರ ಜೊತೆಯಲ್ಲೇ ಶಿಕ್ಷಣ ನೀತಿ ಜಾರಿಯ ಬಗ್ಗೆ ನಿರಂತರ ಶ್ರಮ, ವಿಷಯವಾರು ತಜ್ಞರ ನೇಮಕ, ಸಮಾಲೋಚನೆಸಿದ್ಧತೆ ನಡೆದಿದೆ. ರಾಜ್ಯದ ಶೈಕ್ಷಣಿಕ ವ್ಯವಸ್ಥೆ ಒಂದು ಸಮಗ್ರ ತಂಡವಾಗಿ ಕೆಲಸ ಮಾಡಿದ ಪರಿಣಾಮ 2021 ಆ. 23 ರಂದು ರಾಜ್ಯದಲ್ಲಿ ವಿದ್ಯುಕ್ತವಾಗಿ ಶಿಕ್ಷಣ ನೀತಿಯನ್ನು ಜಾರಿಗೆ ತರಲು ಸಾಧ್ಯವಾಯಿತು ಎಂದಿದ್ದಾರೆ.

ಡಾ. ಕೆ ಕಸ್ತೂರಿ ರಂಗನ್ ರವರ ಬಗ್ಗೆ ಪರಿಚಯದ ಅಗತ್ಯವಿಲ್ಲ, ಆಕಾಶದೆತ್ತರದಷ್ಟು ಸಾಧನೆ ಮಾಡಿದ ನಮ್ಮ ದೇಶದ ಹೆಮ್ಮೆಯ ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ವಿಶ್ರಾಂತ ಅಧ್ಯಕ್ಷರು ಆದ ಅವರು, ಮತ್ತವರ ತಂಡದ ಐದೂವರೆ ವರ್ಷಗಳ ಅವಿರತ ಶ್ರಮವೇ ರಾಷ್ಟ್ರೀಯ ಶಿಕ್ಷಣ ನೀತಿ. ನಮ್ಮ ರಾಜ್ಯದವರೇ ಆದ ಶ್ರೇಷ್ಠ ಶಿಕ್ಷಣತಜ್ಞ ಡಾ. ಎಂ ಕೆ ಶ್ರೀಧರ್, ಪ್ರಖ್ಯಾತ ವಿದ್ವಾಂಸ ಪ್ರೊ. ಟಿ.ವಿ ಕಟ್ಟಮನಿ ಕರಡು ಸಮಿತಿ ಸದಸ್ಯರಾಗಿದ್ದರು. ಮೂರು ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಪಡೆಯಲಾಗಿದೆ ಎನ್ನುವುದು ಗಮನಾರ್ಹ. ರಾಷ್ಟ್ರಕ್ಕಾಗಿ ಸಮರ್ಪಣಾ ಮನೋಭಾವದಿಂದ ದುಡಿಯುತ್ತಿರುವ ವಿವಿಧ ಕ್ಷೇತ್ರಗಳ ಸಾಧಕರು ರೂಪಿಸಿದ ಶಿಕ್ಷಣ ನೀತಿ ಕೆಲವರಿಗೆ ಮಾತ್ರ ಏಕೆ ಅರ್ಥವಾಗುತ್ತಿಲ್ಲ ಎನ್ನುವುದು ವಿಷಾದನೀಯ ಸಂಗತಿ.

ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಕಾಂಗ್ರೆಸ್ ಅಸಂಬದ್ಧವಾಗಿ ಟೀಕಿಸುತ್ತಿದೆ. ಅವರ ಪ್ರಕಾರ ರಾಜ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಬೇಡವೇ? ಜಾಗತಿಕ ಮಟ್ಟದಲ್ಲಿ ಕನ್ನಡಿಗರ ಪಾರುಪತ್ಯ ಬೇಡವೇ? ಅಂತರರಾಷ್ಟ್ರೀಯವಾಗಿ ನಮ್ಮ ಇವತ್ತಿನ ಶಿಕ್ಷಣದ ಸ್ಪರ್ಧಾತ್ಮಕ ಸೂಚ್ಯಂಕ ಯಾವ ಮಟ್ಟದಲ್ಲಿದೆ ಎಂಬುದನ್ನು ಅವರೇಕೆ ಪರಿಶೀಲನೆ ಮಾಡುತ್ತಿಲ್ಲ?

ಹೊಸ ರಾಷ್ಟ್ರೀಯ ಶಿಕ್ಷಣದ ಮೂಲಕ 2030ರ ವೇಳೆಗೆ ಶೇಕಡ 100 ರಷ್ಟು ಯುವ ಜನತೆ ಮತ್ತು ವಯಸ್ಕರ ಸಾಕ್ಷರತೆ ತರುವ ಗುರಿ ನಮ್ಮ ಉದ್ದೇಶವಾಗಿದೆ. ಪ್ರಾಥಮಿಕ, ಪ್ರೌಢ ಶಿಕ್ಷಣದ ಹಂತದಲ್ಲೇ ಸರ್ವರಿಗೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಒದಗಿಸಿ ಒಬ್ಬ ವ್ಯಕ್ತಿಯನ್ನು ಮುಕ್ತ ಮನಸ್ಸಿನಿಂದ ತಾರ್ಕಿಕವಾಗಿ ಆಲೋಚಿಸುವಂತೆ ಮಾಡುವುದೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದೆ.

ಮಗುವೊಂದು ಶಾಲಾ ವ್ಯವಸ್ಥೆ ಸೇರಿ 15 ವರ್ಷಗಳ ಕಾಲ ಶಿಕ್ಷಣ ಪಡೆದು ಯುವಕನಾಗಿ ಹೊರಬಂದಾಗಲೂ ಆರ್ಥಿಕವಾಗಿ ಸ್ವತಂತ್ರವಾಗಲು ಕೌಶಲ್ಯದ ಕೊರತೆ ಅಡ್ಡಿ ಮಾಡುತ್ತದೆ. ಆದ್ದರಿಂದಲೇ ಶಿಕ್ಷಣದ ಸ್ವರೂಪದಲ್ಲಿ ತಕ್ಕ ಮಾರ್ಪಾಡುಗಳನ್ನು ಎನ್ಇಪಿ ಯಲ್ಲಿ ಹೇಳಲಾಗಿದೆ. ಶಿಕ್ಷಣದ ಹೊಸ ಸ್ವರೂಪವನ್ನು ನಿರ್ಮಿಸುವ ಮೂಲ ಗುರಿಯನ್ನು ಚಾಚೂತಪ್ಪದೆ ಪೂರೈಸುತ್ತದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ. ಶಿಕ್ಷಣವೆಂದರೆ ಕೇವಲ ಓದು-ಬರಹ-ಲೆಕ್ಕಚಾರ ವಲ್ಲ. ಬದಲಿಗೆ ಶಿಕ್ಷಣವು ಸಾಮಾಜಿಕ-ಸಾಂಸ್ಕೃತಿಕ ಬೌದ್ಧಿಕ ಪರಿವರ್ತನೆಯ ಸಾಧನವಾಗಬೇಕು. ಕಲಿತ ನಂತರ ಸ್ವಾಭಿಮಾನಿ, ಸ್ವಾವಲಂಬಿ ಸಮಾಜದ ನಿರ್ಮಾಣಕ್ಕೆ ಕಟಿಬದ್ಧರಾಗಬೇಕು.

ಶಿಕ್ಷಣ ನೀತಿಯನ್ನು ದೇಶದಲ್ಲಿ ಮೊದಲು ಅನುಷ್ಠಾನಗೊಳಿಸುವಲ್ಲಿ ನಾವು ಚೊಚ್ಚಲ ಹೆಜ್ಜೆ ಇಡುತ್ತಿದ್ದೇವೆ ಎನ್ನುವುದಕ್ಕಿಂತ, ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸ್ವಾತಂತ್ರ್ಯ ನೀಡುವಲ್ಲಿ ಮತ್ತು ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ಕಟ್ಟುವಲ್ಲಿ ಮೊದಲ ಹೆಜ್ಜೆ ಇಡುತ್ತಿದ್ದೇವೆ ಎಂಬುದು ಹೆಚ್ಚು ಅರ್ಥಪೂರ್ಣ. ಈ ಎಲ್ಲಾ ಕಾರಣಗಳಿಂದ ಹೊಸ ಶಿಕ್ಷಣ ನೀತಿಯ ಬಗ್ಗೆ ಗೊಂದಲ ಉಂಟುಮಾಡಿದೆ ಇದನ್ನು ಟೀಕಿಸುವುದರ ಬದಲು ವಿದ್ಯಾರ್ಥಿ ಸ್ನೇಹಿ ನೀತಿಯನ್ನು ಬೆಂಬಲಿಸಬೇಕು. ಪ್ರಾದೇಶಿಕ ಮತ್ತು ರಾಷ್ಟ್ರ ಹಿತವನ್ನು ಮನದಟ್ಟು ಮಾಡಿಕೊಂಡು ಸಮಗ್ರ ಅಭಿವೃದ್ಧಿಗೆ ಪೂರಕ ಚಿಂತನೆ ಮಾಡಬೇಕೆಂಬುದು ನನ್ನ ಅಭಿಲಾಷೆ ಎಂದು ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿರಾಷ್ಟ್ರೀಯ ಶಿಕ್ಷಣ ನೀತಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ದೇಶದ ಕೆಲವು ರಾಜ್ಯಗಳಲ್ಲಿ ಹೆಚ್ಚುತ್ತಿರುವ ಕೊರೋನಾ! ಸಾರ್ವಜನಿಕರಲ್ಲಿ 3ನೇ ಅಲೆಯ ಭೀತಿ…

Next Post

ಗಮನಿಸಿ! ಸೆ.14ರಿಂದ 19ರವರೆಗೆ ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

kalpa News

kalpa News

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಸೆ.14ರಿಂದ 19ರವರೆಗೆ ಭದ್ರಾವತಿಯ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL