No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ನ್ಯಾಷನಲ್ ಹೆರಾಲ್ಡ್ ಪ್ರಕರಣ | ಅನಗತ್ಯ ಆರೋಪ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

kalpa News by kalpa News
December 18, 2025
in ಶಿವಮೊಗ್ಗ
0
ನ್ಯಾಷನಲ್ ಹೆರಾಲ್ಡ್ ಪ್ರಕರಣ | ಅನಗತ್ಯ ಆರೋಪ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ #National Herald Case ಪಕ್ಷದ ರಾಷ್ಟ್ರೀಯ ನಾಯಕರ ಮೇಲೆ ಇಡಿ ಮೇಲೆ ಪ್ರಭಾವ ಬೀರಿ ಅನಗತ್ಯ ಆರೋಪ ಸೃಷ್ಟಿಸಿರುವುದು ಹಾಗೂ ಮನ್ರೇಗಾ ಹೆಸರು ಬದಲಾವಣೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಬೆಳಗ್ಗೆ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿ ಬಂಧನಕ್ಕೆ ಒಳಗಾದರು.

ಪತ್ರಿಭಟನಾಕಾರರು ಜೈಲ್ ಸರ್ಕಲ್ (ದೈವಜ್ಞ ಸರ್ಕಲ್)ನಲ್ಲಿ ಪ್ರತಿಭಟನೆ ನಡೆಸಿ ಬಳಿಕ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಬೃಹತ್ ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆಯಲ್ಲಿ ತೆರಳಿ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ಬಂಧಿಸಿದರು.

ಎಎಸ್‍ಐ ಅಮೃತಾಬಾಯಿ ಅವರ ಮಾಂಗಲ್ಯಸರ ನಾಪತ್ತೆ
ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಬಂದೋಬಸ್ತಿಗೆ ನೂರಾರು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಇದರಲ್ಲಿ ಮಹಿಳಾ ಪೊಲೀಸರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂದರ್ಭದಲ್ಲಿ ಕೋಟೆ ಠಾಣೆಯ ಎಎಸ್‍ಐ ಅಮೃತಾಬಾಯಿಯವರ ಸುಮಾರು 60 ಗ್ರಾಂ ತೂಕದ 7 ಲಕ್ಷ ರೂ. ಮೌಲ್ಯದ ಮಾಂಗಲ್ಯಸರ ಕಳೆದು ಹೋಗಿದ್ದು, ಆತಂಕಕ್ಕೆ ಕಾರಣವಾಯಿತು. ಮಾಂಗಲ್ಯಸರ ಕಳೆದುಕೊಂಡ ಅಮೃತಾಬಾಯಿ ಕಣ್ಣೀರು ಹಾಕಿದರು. ಸರ ಕಳುವಾಗಿದೆಯಾ ಅಥವಾ ಕಳೆದು ಹೋಗಿದೆಯಾ ಎಂಬುದು ತನಿಖೆಯ ಬಳಕವಷ್ಟೇ ಗೊತ್ತಾಗಬೇಕಿದೆ. ಪೊಲೀಸರು ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಪ್ರತಿಭಟನೆಯ ನೂಕುನುಗ್ಗಲಿನಲ್ಲಿ ಸರ ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದ್ದು, ಇದೊಂದು ಗಂಭೀರ ಪ್ರಕರಣವಾಗಿದೆ. ಪೊಲೀಸರ ಸರವನ್ನೇ ಅಪಹರಿಸುತ್ತಾರೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದರು. ಅಮೃತ ಬಾಯಿಯವರು ಈ ಬಗ್ಗೆ ದೂರು ಕೊಡುವುದಾಗಿ ತಿಳಿಸಿದರು.

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾಗಾಂಧಿ ಮತ್ತು ರಾಹುಲ್‍ಗಾಂಧಿ ವಿರುದ್ಧ ಇಡಿ ದಾಖಲಿಸಿದ್ದ ಅಕ್ರಮ ಹಣ ವರ್ಗಾವಣೆಯ ದೂರು ಸ್ವೀಕರಿಸಲು ದೆಹಲಿಯ ನ್ಯಾಯಾಲಯವೇ ನಿರಾಕರಿಸಿದೆ. ಇದನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಕಾರಣಕ್ಕಾಗಿ ನಮ್ಮ ನಾಯಕರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಬಿಜೆಪಿ ಉದ್ದೇಶಪೂರ್ವಕವಾಗಿ ಗಾಂಧಿಕುಟುಂಬಕ್ಕೆ ಕಿರುಕುಳ ನೀಡುವುದು ಮತ್ತು ವಿಪಕ್ಷಗಳನ್ನು ಗುರಿಯಾಗಿಸುವುದು ಇದು ಸೇಡಿನ ಪ್ರಕರಣವಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.
ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ರಾಜಕೀಯ ಉದ್ದೇಶಕ್ಕಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ. ವಿರೋಧ ಪಕ್ಷಗಳನ್ನು ನಿರಂತರವಾಗಿ ಗುರಿಯನ್ನಾಗಿಸಿಕೊಳ್ಳುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ನಮ್ಮ ಆಕ್ರೋಶವಿದ್ದು ಇದನ್ನು ನಾವು ಬಯಲು ಮಾಡುತ್ತೇವೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಅಲ್ಲದೆ ನರೇಗಾ ಯೋಜನೆಯ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಲು ಹೊರಟಿರುವುದು ಸರಿಯಲ್ಲ, ಇದು ಮಹಾತ್ಮಾಗಾಂಧೀಜಿಯವರ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಂತೆ ಆಗುತ್ತದೆ. ಯಾವುದೇ ಕಾರಣಕ್ಕೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಹೆಸರನ್ನು ಮತ್ತು ಸ್ವರೂಪವನ್ನು ಬದಲಾಯಿಸಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ್‍ಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಉಪಾಧ್ಯಕ್ಷ ಎಸ್.ಟಿ. ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂಪಾಷಾ, ಶಿವಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್. ರಮೇಶ್, ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ರಮೇಶ್ ಶಂಕರಘಟ್ಟ, ರಾಜ್ಯ ಸಂಚಾಲಕ ಜಿ.ಡಿ. ಮಂಜುನಾಥ್, ಜವಳಿ ನಿಗಮದ ಅಧ್ಯಕ್ಷ ಚೇತನ್, ಆಪ್‍ಕಾಪ್ಸ್ ಅಧ್ಯಕ್ಷ ವಿಜಯಕುಮಾರ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್, ಪ್ರಮುಖರಾದ ಆರ್. ರಾಜಶೇಖರ್, ದೇವೇಂದ್ರಪ್ಪ, ವಿಜಯಲಕ್ಷ್ಮೀ ಸಿ. ಪಾಟೀಲ್, ಇಸ್ಮಾಯಿಲ್ ಖಾನ್, ಎಸ್.ಪಿ. ಶೇಷಾದ್ರಿ, ಮಧುಸೂದನ್, ಕೆ. ರಂಗನಾಥ್, ಹೆಚ್.ಸಿ. ಯೋಗೀಶ್, ಹರ್ಷಿತ್‍ಗೌಡ, ಹೆಚ್.ಪಿ. ಗಿರೀಶ್, ವಿಶ್ವನಾಥ್‍ಕಾಶೀ, ನಾಗರಾಜ್ ಕಂಕಾರಿ, ಪಾಲಾಕ್ಷಿ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNational Herald CaseNews in KannadaNews KannadaShimogaShivamoggaNewsನ್ಯಾಷನಲ್ ಹೆರಾಲ್ಡ್ ಪ್ರಕರಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸೈಬರ್ ಅಪರಾಧ | ಕೋಟ್ಯಂತರ ರೂ. ವಂಚನೆಯ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದ ಡಿ.ಎಸ್. ಅರುಣ್

Next Post

ನಿತ್ಯ ಜೀವನಕ್ಕೆ ಗೀತೆಯ ಮಹತ್ವ ಸಾರಿದ ಅದ್ಭುತ ಆಯೋಜನೆ

kalpa News

kalpa News

Next Post
ನಿತ್ಯ ಜೀವನಕ್ಕೆ ಗೀತೆಯ ಮಹತ್ವ ಸಾರಿದ ಅದ್ಭುತ ಆಯೋಜನೆ

ನಿತ್ಯ ಜೀವನಕ್ಕೆ ಗೀತೆಯ ಮಹತ್ವ ಸಾರಿದ ಅದ್ಭುತ ಆಯೋಜನೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL