ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ D K Shivakumar ಅವರಿಗೆ ಫೆ.22ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ಇಡಿ) ಸಮನ್ಸ್ ಜಾರಿ ಮಾಡಿದೆ.
ಈ ಕುರಿತಂತೆ ಮಾತನಾಡಿರುವ ಡಿ.ಕೆ. ಶಿವಕುಮಾರ್, ಇಡಿ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ನಾನು ಉತ್ತರ ನೀಡಿದ್ದರೂ ಸಹ ಮತ್ತೆ ಸಮನ್ಸ್ ನೀಡಿದೆ ಎಂದು ಕಿಡಿ ಕಾರಿದರು.
ನನಗೆ ಪ್ರತಿದಿನ ನೋಟೀಸ್’ಗಳು ಬರುತ್ತಿರುತ್ತವೆ. ನನ್ನ ಮಗಳಿಗೆ ಅವಳ ಶಾಲೆಯ ಫೀಸ್ ಹಾಗೂ ಪರೀಕ್ಷೆ ಫಲಿತಾಂಶ ಕುರಿತಂತೆ ನೋಟೀಸ್ ಬಂದಿದೆ. ಅಲ್ಲಿಗೆ ಯಾವ ರೀತಿಯ ಪ್ರಶ್ನೆಗಳನ್ನು ಕೇಳಬಹುದು ಎಂಬುದನ್ನು ನೀವು ಊಹಿಸಿಕೊಳ್ಳಬಹುದು ಎಂದರು.
Also read: ವಿಐಎಸ್’ಎಲ್ ಕಾರ್ಮಿಕರೇ ಅತಂಕ ಬೇಡ ಎಂದ ಸಿಎಂ ಬೊಮ್ಮಾಯಿ ನೀಡಿದ ಭರವಸೆಯೇನು?
ಅವರು ಕೇಳಿರುವ ಪ್ರಶ್ನೆಗಳಿಗೆ ಈಗಾಗಲೇ ಉತ್ತರ ನೀಡಿದ್ದೇನೆ. ಆದರೂ ಫೆ.22ರಂದು ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ನಾನು ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕಾ ಅಥವಾ ಅವರ ಮುಂದೆ ಕೂರಬೇಕಾ ಎಂದು ಬೇಸರ ವ್ಯಕ್ತಪಡಿಸಿದರು.
ನ್ಯಾಶನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಈಗಾಗಲೇ ಎರಡು ಬಾರಿ ವಿಚಾರಣೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post