ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ನಗರದ ಗೋಪಾಲ ಗೌಡ ಬಡಾವಣೆ ದ್ರೌಪದಮ್ಮ ಸರ್ಕಲ್ ಬಳಿ ಕಳೆದ ರಾತ್ರಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ 11 ಬಾರಿ ಕೋಕೋ ಕ್ರೀಡೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದ ನವೀನ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಖೋ ಖೋ ಪಂದ್ಯಾವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದು 11 ಬಾರಿ ರಾಷ್ಟ್ರೀಯ ಖೋ ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಗೋಪಾಲಗೌಡ ಬಡಾವಣೆಯ ಮೃತ್ಯುಂಜಯ ಯುವಕ ಸಂಘ ಹಾಗೂ ಇನ್ನಿತರ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು. ಇವರ ಅಕಾಲಿಕ ನಿಧನದಿಂದಾಗಿ ಒಬ್ಬ ಸಮಾಜಮುಖಿ ಕ್ರೀಡಾಪಟು ಹಾಗೂ ಯುವ ಮುಖಂಡರನ್ನು ಕಳೆದುಕೊಂಡಂತಾಗಿದೆ.
ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಸಂತಾಪ:
ಮಾಜಿ ಶಾಸಕ ಕೆ .ಬಿ. ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ .ಎಸ್. ಸುಂದರೇಶ್, ಗೋಪಾಲಗೌಡ ಬಡಾವಣೆ ನಾಗರೀಕ ಹಿತರಕ್ಷಣಾ ವೇದಿಕೆಯ ಜಿ.ಡಿ. ಮಂಜುನಾಥ್, ಆರ್. ರಾಜಶೇಖರ್, ಟಿ. ಮಂಜಪ್ಪ , ಮೃತ್ಯುಂಜಯ ಯುವಕ ಸಂಘದ ಗಿತೇಂದ್ರಗೌಡ, ಶಿವಕುಮಾರ್, ವಿಕ್ರಂ ಶೆಟ್ಟಿ , ಸಂತೋಷ್, ಪ್ರಕಾಶ್, ತೇಜಸ್ವಿ ಗೌಡ , ಕುಟ್ಟಿ ನವೀನ್ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post