ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ನೆಚ್ಚಿನ ಪ್ರಾಂಶುಪಾಲರಾಗಿದ್ದ ಪ್ರೊ. ಜಿ.ಆರ್. ಜಗದೀಶ್ (60) ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮೃತರು ಪತ್ನಿ, ಇಬ್ಬರು ಪುತ್ರರು, ಅಪಾರ ಬಂಧುಗಳು, ಸಾವಿರಾರು ಸಂಖ್ಯೆಯ ವಿದ್ಯಾರ್ಥಿಗಳನ್ನು ಅಗಲಿದ್ದಾರೆ.
ಜಗದೀಶ್ ಅವರು ಮೈಸೂರು ವಿವಿಯಲ್ಲಿ ಕಾನೂನು ಸ್ನಾತಕೋತ್ತರ ಪದವಿ ಪಡೆದ ನಂತರ ಕೆಲಕಾಲ ವಕೀಲರಾಗಿ ಕಾರ್ಯ ನಿರ್ವಹಿಸಿದ ಇವರು, ಶಿವಮೊಗ್ಗದ ಸಿಬಿಆರ್ ರಾಷ್ಟ್ರೀಯ ಕಾನೂನು ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು.

Also read: ವಿಐಎಸ್’ಎಲ್ ಮುಚ್ಚುವ ನಿರ್ಧಾರ: ಯು.ಟಿ. ಖಾದರ್, ಪ್ರಿಯಾಂಕ್ ಖರ್ಗೆ ವಾಗ್ದಾಳಿ
ಕುವೆಂಪು ವಿಶ್ವವಿದ್ಯಾಲಯ ಹಾಗೂ ಕರ್ನಾಟಕ ಕಾನೂನು ವಿಶ್ವವಿದ್ಯಾಲಯಗಳಲ್ಲಿ ಸೆನೆಟ್ ಸಿಂಡಿಕೇಟ್ ಸದಸ್ಯರಾಗಿ ಅಕಾಡೆಮಿಕ್ ಕೌನ್ಸಿಲ್‌ನ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಕೆಲಕಾಲ ಕರ್ನಾಟಕ ಕಾನೂನು ವಿಶ್ವವಿದ್ಯಾನಿಯಲದ ಪ್ರಭಾರಿ ಉಪಕುಲಪತಿಗಳಾಗಿ ಕಾರ್ಯ ನಿರ್ವಹಿಸಿ ಎಲ್ಲರಿಂದಲೂ ಪ್ರಶಂಸೆಗೊಳಗಾಗಿದ್ದರು.

ಪ್ರೊ. ಜಿ.ಆರ್. ಜಗದೀಶ್ ಅವರ ನಿಧನಕ್ಕೆ ಜಿಲ್ಲಾ ವಕೀಲರ ಸಂಘ, ಎನ್.ಇ.ಎಸ್ ಆಡಳಿತ ಮಂಡಳಿ, ಸ್ನಾತಕೋತ್ತರ ಪದವೀಧರರ ಸಹಕಾರ ಸಂಘ, ಎನ್.ಇ.ಎಸ್ ನೌಕರರ ಸಂಘ, ಭಾರತೀಯ ಸಣ್ಣ ಮತ್ತು ಪತ್ರಿಕೆಗಳ ಒಕ್ಕೂಟ, ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದಾರೆ.











Discussion about this post