ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗಣಿತದ ಪ್ರತಿಭಾನ್ವಿತ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನಾಚರಣೆಯ ಗೌರವಾರ್ಥ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ 139ನೇ ರಾಷ್ಟ್ರೀಯ ಗಣಿತ ದಿನಾಚರಣೆ #National Mathematics Day ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಗಣಿತ ವಿಭಾಗದ ಶಿಕ್ಷಕರು ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರಕ್ಕೆ ಪುಷ್ಪವನ್ನು ಅರ್ಪಿಸುವುದರ ಮೂಲಕ ಸುಲಭ ರೀತಿಯ ಗಣಿತ ಕಲಿಕೆಗೆ ಮಕ್ಕಳಿಂದ ವಿವಿಧ ಚಟುವಟಿಕೆಗಳು ಹಾಗೂ ಗಣಿತ ವಿಭಾಗದ ಮುಖ್ಯಸ್ಥರಿಂದ ಮ್ಯಾಜಿಕ್ ಮಾಥ್ ಕಲಿಕೆಯ ಅರಿವು ಮೂಡಿಸಿದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲ ಸೋಮಶೇಖರಯ್ಯ ಹಾಗೂ ಶಾಲೆಯ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

