ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಪ್ರಾರಂಭಗೊಂಡಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಎರಡನೇ ದಿನವಾದ ಇಂದು ಕೋಟೆ ಪೋಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಪ್ರಸಾದ್ ರಾವ್ ಧ್ವಜಾರೋಹಣ ನೆರವೇರಿಸಿದರು.
ಕರ್ನಾಟಕ, ಆಂಧ್ರಪ್ರದೇಶ, ಮಧ್ಯಪ್ರದೇಶ, ತಮಿಳುನಾಡು ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ 160 ಎನ್.ಎಸ್.ಎಸ್. ಸ್ವಯಂಸೇವಕರು ಮತ್ತು ಅಧಿಕಾರಿಗಳು ಭಾಗವಹಿಸಿದ್ದು, ಶಿಬಿರದ ಅಂಗವಾಗಿ ಸಕ್ರೆಬೈಲು ಆನೆಬಿಡಾರಕ್ಕೆ ಭೇಟಿ ನೀಡಿದ ಶಿಬಿರಾರ್ಥಿಗಳಿಗೆ ಉಪಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗರ ಅವರು, ಪರಿಸರ ಸಮತೋಲನದಲ್ಲಿ ಜೀವ ಸಂಕುಲಗಳ ಪಾತ್ರ, ಆನೆಗಳ ಮಹತ್ವ, ಜೀವನ ಶೈಲಿ ಕುರಿತಾಗಿ ಶಿಬಿರಾರ್ಥಿಗಳಿಗೆ ವಿವರಿಸಿದರು.
ನಂತರ ಇತಿಹಾಸ ಪ್ರಸಿದ್ಧ ಕವಲೇದುರ್ಗ ಕೋಟೆಗೆ ಚಾರಣ ಹಮ್ಮಿಕೊಳ್ಳಲಾಗಿತ್ತು. ಚಾರಣ ಸಮಯದಲ್ಲಿ ಕವಲೇದುರ್ಗದ ಇತಿಹಾಸವನ್ನು ಶಿಬಿರಾರ್ಥಿಗಳಿಗೆ ತಿಳಿಸಿ ಕೊಡಲಾಯಿತು.
ಈ ಸಂದರ್ಭದಲ್ಲಿ ಜೆಸಿಬಿ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿಗಳಾದ ಪ್ರಶಾ೦ತ್, ಸಂತೋಷ್‌ಕುಮಾರ್ ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. ಕಾರ್ಯಕ್ರಮ ಸಂಯೋಜಾನಾಧಿಕಾರಿಗಳಾದ ಡಾ. ನಾಗರಾಜ ಪರಿಸರವರು ಪ್ರವಾಸದ ನೇತೃತ್ವವಹಿಸಿದ್ದರು. ವಿವಿಧ ರಾಜ್ಯಗಳಿ೦ದ ಆಗಮಿಸಿದ ಶಿಬಿರಾಧಿಕಾರಿಗಳು, ಶಿಬಿರಾರ್ಥಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post