No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Saturday, August 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕಾರ್ಮಿಕರ ವಸತಿ ಸಮುಚ್ಚಯ ನಿರ್ಮಾಣಕ್ಕೆ ಅಗತ್ಯ ಅನುದಾನ: ಸಚಿವ ಅರಬೈಲು ಶಿವರಾಮ್ ಹೆಬ್ಬಾರ್

kalpa News by kalpa News
June 28, 2022
in ಶಿವಮೊಗ್ಗ
0
ಕಾರ್ಮಿಕರ ವಸತಿ ಸಮುಚ್ಚಯ ನಿರ್ಮಾಣಕ್ಕೆ ಅಗತ್ಯ ಅನುದಾನ: ಸಚಿವ ಅರಬೈಲು ಶಿವರಾಮ್ ಹೆಬ್ಬಾರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕಾರ್ಮಿಕರ ವಿಸ್ತೃತ ವಸತಿ ಸಮುಚ್ಚಯ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ : ಅರಬೈಲು ಶಿವರಾಮ್ ಹೆಬ್ಬಾರ್
ಶಿವಮೊಗ್ಗ ಸಮೀಪದ ಸಿದ್ಲೀಪುರ ಗ್ರಾಮದಲ್ಲಿ 10 ಎಕರೆ ಜಾಗದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ 500 ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ವಸತಿ ಸಮುಚ್ಛಯವನ್ನು ನಿರ್ಮಿಸಲು ಉದ್ದೇಶಿಸಲಾಗಿದ್ದು, ಹೆಚ್ಚುವರಿ 500 ಮಂದಿ ಕಾರ್ಮಿಕರು ಉಳಿದುಕೊಳ್ಳಲು ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲಾಗುವುದು ಎಂದು ರಾಜ್ಯ ಕಾರ್ಮಿಕ ಸಚಿವ ಅರಬೈಲು ಶಿವರಾಮ್ ಹೆಬ್ಬಾರ್ Minister Arabailu Shivaram Hebbar ಅವರು ಹೇಳಿದರು.

ಅವರು ಇಂದು ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಸಿದ್ಲೀಪುರದಲ್ಲಿ ಕಾರ್ಮಿಕರಿಗೆ ವಸತಿ ಸಮುಚ್ಛಯ ಕಾಮಗಾರಿಯ ಗುದ್ದಲಿ ಪೂಜೆ ಮತ್ತು ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಇರುವ ಒಟ್ಟು ಕಾರ್ಮಿಕ ಕುಟುಂಬಗಳಲ್ಲಿ ಮೊದಲ ಹಂತದಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ 30000 ಕುಟುಂಬಗಳ ಸದಸ್ಯರಿಗೆ 20 ರೀತಿಯ ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಅದಕ್ಕಾಗಿ ಪ್ರತಿ ವ್ಯಕ್ತಿಗೆ 11600ರೂ.ಗಳಂತೆ ಹಣ ಖರ್ಚು ಮಾಡಲಾಗುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ 30000 ಮಂದಿಯ ಆರೋಗ್ಯ ತಪಾಸಣೆಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುವುದು ಎಂದರು.

ಕಾರ್ಮಿಕರ ಮಕ್ಕಳಲ್ಲೂ ಎಲ್ಲಾ ರೀತಿಯ ಅರ್ಹತೆ ಇದ್ದು ಅವರಿಗೂ ಸಮಾಜದಲ್ಲಿ ಗುರುತಿಸುವ ಹಾಗೂ ಸ್ವಾಭಿಮಾನದಿಂದ ಜೀವಿಸುವ ಅವಕಾಶ ಒದಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರ್ಮಿಕರ ಅರ್ಹ ಮತ್ತು ಆಸಕ್ತ ಮಕ್ಕಳನ್ನು ಪೈಲಟ್ ಆಗಿಸುವ ನಿಟ್ಟಿನಲ್ಲಿ 18 ತಿಂಗಳ ತರಬೇತಿಯನ್ನು ಆಯೋಜಿಸಲಾಗಿದೆ. ಐಎಎಸ್ ಮತ್ತು ಕೆಎಎಸ್ ತರಬೇತಿಯೊಂದಿಗೆ ಶಿಷ್ಯವೇತನ ನೀಡಿ ಪ್ರೋತ್ಸಾಹಿಸುತ್ತಿರುವುದು ದೇಶದಲ್ಲೇ ಮೊದಲು ಎಂದರು.

Also read: ರಾಜ್ಯದಲ್ಲೇ ಉತ್ತಮ ತಾಯಿ, ಮಕ್ಕಳ ಆಸ್ಪತ್ರೆ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ಸರ್ಜಿ ಹಾಸ್ಪಿಟಲ್

ಈಗಾಗಲೇ ರಾಜ್ಯದಲ್ಲಿ 4,91,000 ಕಾರ್ಮಿಕ ಮಕ್ಕಳಿಗೆ 400 ಕೋ.ರೂ.ಗಳ ವಿದ್ಯಾರ್ಥಿವೇತನ ನೀಡಲಾಗಿದೆ. ಅಲ್ಲದೆ ರಾಜ್ಯದ ಒಟ್ಟು ಕಾರ್ಮಿಕರಲ್ಲಿ ಈವರೆಗೆ ಸುಮಾರು 70000 ಕಾರ್ಮಿಕರು ಇ-ಶ್ರಮ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.

ಸಂಸದ ಬಿ.ವೈ. ರಾಘವೇಂದ್ರ ಮಾತನಾಡಿ, ರಾಜ್ಯದ ಅಸಂಘಟಿತ ಕಾರ್ಮಿಕರು, ಉದ್ಯೋಗ ಅರಸಿ ಊರಿಂದೂರಿಗೆ ತೆರಳುವ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವ ಹಾಗೂ ಸರ್ಕಾರಿ ಸೇವಾಸೌಲಭ್ಯಗಳಿಗಾಗಿ ಇ-ಶ್ರಮ್ ಕಾರ್ಡನ್ನು ವಿತರಿಸಲಾಗುತ್ತಿದೆ ಎಂದರು.
ಪ್ರಸ್ತುತ ಆಯೋಜಿಸಲಾಗಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯದಿಂದ ಗಂಭೀರ ಸ್ವರೂಪದ ಕಾಯಿಲೆಗಳು ಗೋಚರಿಸಿದಲ್ಲಿ ಚಿಕಿತ್ಸೆಗಾಗಿ ಮಾಡಲಾದ ವೈದ್ಯಕೀಯ ವೆಚ್ಚವನ್ನು ಸರ್ಕಾರದ ವತಿಯಿಂದ ಮರುಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಕೊರೋನದಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವರು ಕೈಗೊಂಡ ಕ್ರಮ ಅಭಿನಂದನಾರ್ಹವಾದುದಾಗಿದೆ ಮಾತ್ರವಲ್ಲ ಸಕಾಲದಲ್ಲಿ ಅಸಂಖ್ಯಾತ ಕಾರ್ಮಿಕರಿಗೆ ಆಹಾರದ ಪೊಟ್ಟಣಗಳನ್ನು ವಿತರಿಸಿದ ಕೀರ್ತಿ ಕಾರ್ಮಿಕ ಸಚಿವರಿಗೆ ಸಲ್ಲುತ್ತದೆ. ಅಲ್ಲದೆ ಹೊರ ರಾಜ್ಯಗಳಿಂದ ರಾಜ್ಯದ ವಿವಿದೆಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅಸಂಖ್ಯಾತ ಕಾರ್ಮಿಕರನ್ನು ಕೋವಿಡ್ ನಂತಹ ಸಂದರ್ಭದಲ್ಲಿ ಸುರಕ್ಷಿತವಾಗಿ ಊರಿಗೆ ಬಿಟ್ಟು ಬರಲಾಯಿತು ಎಂದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ. ನಾರಾಯಣಗೌಡ ಅವರು ಮಾತನಾಡಿ, ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಸಕಾಲದಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ ಹಸ್ತಾಂತರಿಸುವಂತೆ ಸೂಚಿಸಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯರಾದ ರುದ್ರೇಗೌಡರು, ಡಿ.ಎಸ್.ಅರುಣ್, ಮೇಯರ್ ಶ್ರೀಮತಿ ಸುನಿತಾ ಅಣ್ಣಪ್ಪ, ಎಸ್.ದತ್ತಾತ್ರಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸಿ.ಇ.ಒ. ಎಂ.ಎಲ್.ವೈಶಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸತೀಶ್ ಮುಂತಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMinister Arabailu Shivaram HebbarNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಅರಬೈಲು ಶಿವರಾಮ್ ಹೆಬ್ಬಾರ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲೇ ಉತ್ತಮ ತಾಯಿ, ಮಕ್ಕಳ ಆಸ್ಪತ್ರೆ ಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ಸರ್ಜಿ ಹಾಸ್ಪಿಟಲ್

Next Post

ಜೂ.29ರಂದು ಪುಟ್ಟರಾಜ ಗವಾಯಿ ಅಂಧ ಮಕ್ಕಳ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ

kalpa News

kalpa News

Next Post
ಮೇ 29ರಂದು ನಿರಂತರ 13 ಗಂಟೆಗಳ ಯುವ ಸಂಗೀತೋತ್ಸವ

ಜೂ.29ರಂದು ಪುಟ್ಟರಾಜ ಗವಾಯಿ ಅಂಧ ಮಕ್ಕಳ ಶಾಲೆಯಲ್ಲಿ ಸಂಗೀತ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL