ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುವೆಂಪು ವಿಶ್ವವಿದ್ಯಾನಿಲಯದಿಂದ ಮೊಟ್ಟಮೊದಲ ಬಾರಿಗೆ ಘೋಷಿಸಲಾದ “ಅತ್ಯುತ್ತಮ ರೋವರ್ಸ್ ಮತ್ತು ರೇಂಜರ್ಸ್ ಘಟಕ ಪ್ರಶಸ್ತಿ”ಯನ್ನು ಎನ್.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್, ಶಿವಮೊಗ್ಗ ಕಾಲೇಜು ತನ್ನ ಮುಡಿಗೇರಿಸಿಕೊಂಡಿತು.
ಇಂದು ವಿಶ್ವವಿದ್ಯಾಲಯದ ಹಿರೇಮಠ್ ಸಭಾಂಗಣದಲ್ಲಿ ನಡೆದ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಉದ್ಘಾಟನಾ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಎ. ಎಲ್. ಮಂಜುನಾಥ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಎನ್.ಇ.ಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ಸೇವಾ ಮನೋಭಾವ, ಶಿಸ್ತಿನ ನಿಲುವು ಮತ್ತು ಸಾಮಾಜಿಕ ಬದ್ಧತೆಯು ಇತರ ಘಟಕಗಳಿಗೆ ಮಾದರಿಯಾಗಿದೆ” ಎಂದು ಪ್ರಶಂಸಿಸಿದರು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ ಶಿವಪ್ರಸಾದ್ ಅವರು ಪ್ರಶಸ್ತಿಯು ನಮಗೆ ಮತ್ತಷ್ಟು ಸಾಧಿಸುವ ಹಂಬಲವನ್ನು ಇಮ್ಮಡಿಗೊಳಿಸಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷರಾದ ಡಾ. ರವೀಂದ್ರ ಗೌಡ ಎಸ್.ಎಂ., ನೋಡಲ್ ಅಧಿಕಾರಿಗಳು, ಕುವೆಂಪು ವಿಶ್ವವಿದ್ಯಾನಿಲಯ, ಪ್ರಶಸ್ತಿಯು ವಿದ್ಯಾರ್ಥಿಗಳ ತ್ಯಾಗ, ಶ್ರಮ ಮತ್ತು ನಾಯಕತ್ವದ ಪರಿಪೂರ್ಣ ಪ್ರತಿಫಲ ಎಂದು ಹೇಳಿದರು.
ಮುಖ್ಯ ಅತಿಥಿಗಳಾದ ಶ್ರೀ ಗಂಗಪ್ಪ ಗೌಡ್ರು, ರಾಜ್ಯ ಮುಖ್ಯ ಕಾರ್ಯದರ್ಶಿಗಳು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಂಗಳೂರು, ಹಾಗೂ ಶಕುಂತಲಾ ಚಂದ್ರಶೇಖರ್, ಜಿಲ್ಲಾ ಮುಖ್ಯ ಆಯುಕ್ತರು, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಇವರು ಘಟಕದ ಸಾಧನೆಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳು ಪ್ರಾಧ್ಯಾಪಕರು, ತರಬೇತುದಾರರು ಹಾಗೂ ವಿದ್ಯಾರ್ಥಿಗಳ ಸಕ್ರಿಯವಾಗಿ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post