ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ದೂರಸಂಪರ್ಕ ಹಾಗೂ ರೈಲ್ವೆ ಮಂತ್ರಾಲಯದ ಸಚಿವ ಅಶ್ವಿನಿ ವೈಷ್ಣವ್ Ashwin Vaishnav ಅವರನ್ನು ಸಂಸದ ಬಿ. ವೈ. ರಾಘವೇಂದ್ರ M P Raghavendra ಭೇಟಿ ಮಾಡಿ, ನೆಟ್ವರ್ಕ್ ಸಂಪರ್ಕ ಟವರ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ 80 ಹಾಗೂ ಉಡುಪಿ ಜಿಲ್ಲೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 16 ಜನವಸತಿ ಪ್ರದೇಶಗಳಲ್ಲಿ ನೆಟ್ವರ್ಕ್ ಸಮಸ್ಯೆಯಿಂದ ಸಾಮಾನ್ಯ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ನೆಟ್ವರ್ಕ್ ಸಂಪರ್ಕ ಸಾಧಿಸಲು ಬಿ.ಎಸ್.ಎನ್.ಎಲ್ ವತಿಯಿಂದ ಟವರ್ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ರೈಲ್ವೆ ವಿಭಾಗಕ್ಕೆ ಸಂಬಂಧಪಟ್ಟಂತೆ ಬೈಂದೂರು ಮೂಕಾಂಬಿಕಾ ರೈಲ್ವೆ ನಿಲ್ದಾಣದಲ್ಲಿ ಗರೀಬ್ ರಥ ಹಾಗೂ ದಾದರ್ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ ಬಗ್ಗೆ ಚರ್ಚಿಸಿ ಸೂಕ್ತ ಕ್ರಮವನ್ನು ಕೂಡಲೇ ಕೈಗೊಳ್ಳಲು ಮನವಿ ಮಾಡಿದರು.
Also read: ಕಾರ್ಗಿಲ್ ಯುದ್ಧದ ವಿಜಯ ಐತಿಹಾಸಿಕ: ನಿವೃತ್ತ ಸೈನಿಕ ಎನ್. ಎಸ್. ಉಪಾಧ್ಯ ಅಭಿಪ್ರಾಯ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post