ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಹಿನ್ನಲೆಯಲ್ಲಿ ಪ್ರತಿ ತಿಂಗಳು ನಡೆಸಿಕೊಂಡು ಬರುತ್ತಿವ ಉಪನ್ಯಾಸ ಸರಣಿಯ ಹನ್ನೊಂದನೇ ಮಾಲಿಕೆಯನ್ನು ಮಾ.28ರ ಮಂಗಳವಾರ ಬೆಳಗ್ಗೆ 10:30 ಕ್ಕೆ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.
ಕಾರ್ಯಕ್ರಮದಲ್ಲಿ ಪ್ರಖ್ಯಾತ ನರಶಸ್ತ್ರರೋಗ ತಜ್ಞ ಹಾಗೂ ನಾರಾಯಣ ಇನ್ಸ್ಟಿಟ್ಯೂಟ್ ಆಫ್ ನ್ಯೂರೊಸೈನ್ಸ್ ನಿರ್ದೇಶಕರಾದ ಡಾ.ತಿಮ್ಮಪ್ಪ ಹೆಗಡೆ ಅವರು ‘ಜೀವನ ಒಂದು ಉಡುಗೊರೆ’ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಪಾಧ್ಯಕ್ಷರಾದ ಸಿ.ಆರ್. ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಸಹ ಕಾರ್ಯದರ್ಶಿಗಳಾದ ಡಾ.ಪಿ.ನಾರಾಯಣ್, ಖಜಾಂಚಿಗಳಾದ ಡಿ.ಜಿ.ರಮೇಶ್ ಉಪಸ್ಥಿತರಿರುವರು. ಈ ಬಾರಿಯ ಕಾರ್ಯಕ್ರಮವನ್ನು ನ್ಯಾಷನಲ್ ಫಾರ್ಮಸಿ ಕಾಲೇಜು ಸಂಯೋಜಿಸಲಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


Discussion about this post