ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸ ಶಿಕ್ಷಣ ನೀತಿಯು ವಿದ್ಯಾರ್ಥಿಗಳ ಸರ್ವತೊಮುಖ ಅಭಿವೃದ್ದಿಗೆ ಪೂರಕವಾದ ವಿಚಾರಗಳನ್ನು ಹೊಂದಿದೆ ಎಂದು ದಂತ ವೈದ್ಯರಾದ ಡಾ.ರವಿಕಿರಣ್ ಅಭಿಪ್ರಾಯಪಟ್ಟರು
ಸೋಮವಾರ ನಗರದ ಎನ್‌ಇಎಸ್ ಇನ್ಸಿಟಿಟ್ಯೂಟ್ ಆಫ್ ಅಡ್ವಾನ್ಸ್ ಸ್ಟಡೀಸ್ ಕಾಲೇಜಿನ ವತಿಯಿಂದ 2021-22ನೇ ಸಾಲಿನ ಪ್ರಥಮ ವರ್ಷದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಓರಿಯಂಟೇಷನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಹೊಸ ಶಿಕ್ಷಣ ನೀತಿಯಲ್ಲಿ ಚರ್ಚಿತ ವಿಚಾರಗಳಾದ ಶೈಕ್ಷಣಿಕ ಅಧ್ಯಯನ, ಕೌಶಲ್ಯತೆ ರೂಡಿಸಿಕೊಳ್ಳುವುದು ಈ ಎಲ್ಲಾ ಅಂಶಗಳು ಸಮರ್ಪಕವಾಗಿ ಅನುಷ್ಟಾನಗೊಳ್ಳಬೇಕಿದೆ ಎಂದು ಹೇಳಿದರು.
ಜೆ.ಎನ್.ಎನ್.ಸಿ ಎಂಜಿನಿಯರಿಂಗ್ ಕಾಲೇಜಿನ ಪ್ರಾದ್ಯಾಪಕರಾದ ಡಾ.ಹೆಚ್.ಬಿ. ಸುರೇಶ್ ಮಾತನಾಡಿ ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಮೂಲಕ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಖಜಾಂಚಿಗಳಾದ ಸಿ.ಆರ್.ನಾಗರಾಜ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಶಿವಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post