ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸ ವರ್ಷ ಸಂಭ್ರಮಾಚರಣೆ #New Year Celebration ಹಿನ್ನೆಲೆಯಲ್ಲಿ ಇಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಎಲ್ಲಾ ಹೋಂ ಸ್ಟೇ, ಹೋಟೆಲ್, ಲಾಡ್ಜ್, ಮತ್ತು ರೆಸಾರ್ಟ್‌ಗಳ ಮಾಲೀಕರು ಹಾಗೂ ವ್ಯವಸ್ಥಾಪಕರ ಸಭೆಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ #SP Mithun Kumar 8 ಸೂಚನೆಗಳನ್ನು ನೀಡಿದರು.
- ಹೊಸ ವರ್ಷ ಆಚರಣೆಯ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸುವ ಪೂರ್ವದಲ್ಲಿ, ಸರಹದ್ದಿನ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳುವುದು. ಪೊಲೀಸ್ ಇಲಾಖೆಯ ಗಮನಕ್ಕೆ ಬಾರದೆ / ಅನುಮತಿ ಪಡೆಯದೇ ಯಾವುದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ.
Also read: ವಿದ್ಯಾರ್ಥಿಗಳು ಸಮಾಜದ ಒಳಿತಿನಲ್ಲಿ ಅಭಿವೃದ್ಧಿ ಕಾಣಿರಿ | ಡಾ.ಎಂ.ಎಸ್. ಮೂಡಿತ್ತಾಯ ಕಿವಿಮಾತು
- ಕಾರ್ಯಕ್ರಮ ಆಯೋಜಿಸುವವರು ಸ್ಥಳಾವಕಾಶವನ್ನು ಗಮನದಲ್ಲಿಟ್ಟುಕೊಂಡು, ಅಷ್ಟೇ ಜನರಿಗೆ ಅನುಮತಿ ನೀಡುವುದು ಹಾಗೂ ಆಯೋಜಿಸಲಾಗುವ ಕಾರ್ಯಕ್ರಮಕ್ಕೆ ಎಷ್ಟು ಜನ ಸೇರುತ್ತಾರೆ ಮತ್ತು ಸಂಖ್ಯೆಗೆ ಅನುಗುಣವಾಗಿ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದು.
- ಕಾರ್ಯಕ್ರಮದ ಆಯೋಜಕರು ಸಂಭ್ರಮಾಚರಣೆಯಲ್ಲಿ ಮಧ್ಯಪಾನಕ್ಕೆ ಅವಕಾಶ ಇದ್ದಲ್ಲಿ, ಅಬಕಾರಿ ಇಲಾಖೆಯ ಷರತ್ತುಗಳು ಹಾಗೂ ಮಾರ್ಗ ಸೂಚಿಯನ್ನು ಕಡ್ಡಾಯವಾಗಿ ಪಾಲನೆ ಮಾಡುವುದು ಹಾಗೂ ಮಧ್ಯಪಾನ ಮಾಡಿ ವಾಹನ ಚಾಲನೆ ಮಾಡುವ ಸ್ಥಿತಿಯಲ್ಲಿ ಇಲ್ಲದಿದ್ದಲ್ಲಿ ಬೇರೆ ಚಾಲಕರ ಏರ್ಪಾಡು ಮಾಡಿ ಕಳುಹಿಸಿಕೊಡುವುದು ಅಥವಾ ಅಲ್ಲಿಯೇ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡುವುದು.
- ಹೊಸ ವರ್ಷದ ಆಚರಣೆಯನ್ನು ಮಧ್ಯ ರಾತ್ರಿ 12ಗಂಟೆಗೆ ಆಚರಿಸಿದ ನಂತರ ರಾತ್ರಿ 1ಗಂಟೆಯ ಒಳಗಾಗಿ ಎಲ್ಲಾ ರೀತಿಯ ಹೊರಾಂಗಣ ಕಾರ್ಯಕ್ರಮಗಳನ್ನು ಮುಕ್ತಾಯ ಮಾಡುವುದು.
- ಕಾರ್ಯಕ್ರಮಕ್ಕೆ ಬರುವ ವಾಹನಗಳಿಗೆ ಸೂಕ್ತ ಮತ್ತು ಸಮರ್ಪಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡುವುದು ಹಾಗೂ 200ಕ್ಕಿಂತ ಹೆಚ್ಚಿನ ಸಾರ್ವಜನಿಕರು ಸೇರುವ ಸ್ಥಳದಲ್ಲಿ, ಕಡ್ಡಾಯವಾಗಿ ಸಿಸಿ ಟಿವಿ ಗಳನ್ನು ಅಳವಡಿಸುವುದು ಮತ್ತು ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರ / ಅತಿಥಿಗಳ ಹೆಸರು ಮತ್ತು ವಿವರವನ್ನು ಬರೆದುಕೊಂಡು, ಯಾವುದಾದರೂ ಒಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳತಕ್ಕದ್ದು.
- ಕಾರ್ಯಕ್ರಮದ ಆಯೋಜಕರುಗಳು ಕಾರ್ಯಕ್ರಮದ ಆಯೋಜಿಸಿದ ಸ್ಥಳದಲ್ಲಿ ಒಳ ಬರುವ ಮತ್ತು ಹೊರ ಹೋಗುವ ದ್ವಾರದಲ್ಲಿ ತಮ್ಮ ಸಿಬ್ಬಂಧಿಗಳನ್ನು ನೇಮಿಸಿಕೊಂಡು, ಸಾರ್ವಜನಿಕರ ಸುರಕ್ಷತೆಯ ಬಗ್ಗೆ ನಿಗಾವಹಿಸುವುದು.
- ಕಾರ್ಯಕ್ರಮದಲ್ಲಿ ಭಾಗವಹಿಸುವ ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗೆ ಆಧ್ಯತೆ ನೀಡಿ, ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡು, ಎಚ್ಚರದಿಂದಿರುವುದು. ಯಾವುದೇ ಸಣ್ಣ ಪುಟ್ಟ ಘಟನೆಗಳು ಜರುಗಿದಾಗ, ಯಾವುದೇ ನಿರ್ಲಕ್ಷತನ ತೋರದೇ ಕೂಡಲೇ 112 ತುರ್ತು ಸಹಾಯವಾಣಿಗೆ ಕರೆ ಮಾಡುವುದು.
- ಕಾರ್ಯಕ್ರಮದಲ್ಲಿ ಅಳವಡಿಸುವ ದ್ವನಿ ವರ್ದಕ, ಪಟಾಕಿ ಸಿಡಿಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ / ತೊಂದರೆಯಾಗದ ರೀತಿ ನೋಡಿಕೊಳ್ಳುವುದು ಹಾಗೂ ಕಾರ್ಯಕ್ರಮ ಆಯೋಜನೆಯ ಸ್ಥಳದಲ್ಲಿ ಈಜುಕೊಳ ( ಸ್ವಿಮ್ಮಿಂಗ್ ಫೂಲ್ ) ಇದ್ದಲ್ಲಿ, ಹೆಚ್ಚಿನ ಗಮನ ಹರಿಸುವುದು ಹಾಗೂ ಈಜುಕೊಳಕ್ಕೆ ಸಾರ್ವಜನಿಕರಿಗೆ ಅವಕಾಶವಿದ್ದಲ್ಲಿ ನುರಿತ ಈಜು ತಜ್ಞರನ್ನು ನೇಮಕ ಮಾಡಿಕೊಂಡು, ಎಲ್ಲಾ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post