ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ/ನವದೆಹಲಿ |
ಶರಾವತಿ ಮುಳಗಡೆ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆಯಿಂದಾಗಿ ಈ ಭಾಗದ ಜನರಿಗೆ ತೀವ್ರ ತೊಂದರೆಯಾಗುತ್ತಿದ್ದು, ಇದರ ಪರಿಹಾರಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿದ್ದಾರೆ.
ಈ ಕುರಿತಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಚರ್ಚೆ ನಡೆಸಿರುವ ಸಂಸದರು, ಈ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆಯಿಂದಾಗಿ ಇಲ್ಲಿನ ಜನರಿಗೆ ನಿರಂತರವಾಗಿ ತೊಂದರೆಯುಂಟಾಗಿದೆ. ಕೆಲವು ಸ್ಥಳಗಳಲ್ಲಿ ಬೇರೆ ನೆಟ್ವರ್ಕ್ ಸಿಗ್ನಲ್’ಗಳ ಸಿಗುವುದಾಗಿ ತಿಳಿದಬಂದ ಕಾರಣ ಬದಲಿಗೆ ಬೇರೆ ಸ್ಥಳಗಳಲ್ಲಿ ನಿರ್ಮಿಸುವಂತೆ ಕೋರಿದ್ದಾರೆ.
ಶಿವಮೊಗ್ಗ ಕ್ಷೇತ್ರಕ್ಕೆ ಮಂಜೂರು ಮಾಡಲಾಗಿರುವ ಬಿಎಸ್’ಎನ್’ಎಲ್ ಮೊಬೈಲ್ ಟವರ್’ಗಳ ಅನುಷ್ಠಾನದ ಬಗ್ಗೆ ಸಚಿವರೊಂದಿಗೆ ಚರ್ಚಿಸಿದರು.
Also read: ಜಿಲ್ಲೆಯ ರೈಲ್ವೆ ಯೋಜನೆಗಳ ಬಗ್ಗೆ ಕೇಂದ್ರ ಸಚಿವರೊಂದಿಗೆ ಎಂಪಿ ರಾಘವೇಂದ್ರ ಚರ್ಚಿಸಿದ್ದೇನು?
ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು ಸಮಸ್ಯೆ ಪರಿಹಾರಕ್ಕೆ ಶೀಘ್ರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಇಂದು ಭರವಸೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post