ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು 12 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 869ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ಜಿಲ್ಲಾಡಳಿತ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಸೋಂಕಿಗೆ ಒಬ್ಬರು ಮೃತಪಟ್ಟಿದ್ದರೆ, 61 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇತ್ತೀಚಿನ ದಿನಗಳಿಗೆ ಹೋಲಿಕೆ ಮಾಡಿದರೆ ಇಂದು ಜಿಲ್ಲೆಯಲ್ಲಿ ಅತಿ ಕಡಿಮೆ ಪ್ರಕರಣಗಳು ಪತ್ತೆಯಾಗಿರುವುದು ಕೊಂಚ ಸಮಾಧಾನ ಮೂಡಿಸಿದೆ.
ಇನ್ನು, ಈವರೆಗೂ 246 ಕಂಟೈನ್ಮೆಂಟ್ ಝೋನ್’ಗಳನ್ನು ಮಾಡಲಾಗಿದ್ದು, ಡಿ ನೋಟಿಫೈಡ್ ಝೋನ್’ಗಳ ಸಂಖ್ಯೆ 45 ಆಗಿದೆ. ಇಂದು ಒಟ್ಟು 304 ಸ್ಯಾಂಪಲ್ ಸಂಗ್ರಹಿಸಲಾಗಿದ್ದು, 87 ಮಂದಿಯ ವರದಿ ನೆಗೆಟಿವ್ ಬಂದಿದೆ ಎಂದು ಬುಲೆಟಿನ್ ತಿಳಿಸಿದೆ.
ತಾಲೂಕುವಾರು ವಿವರ: ಶಿವಮೊಗ್ಗ: 4 ಭದ್ರಾವತಿ: 6 ಶಿಕಾರಿಪುರ: 1 ಸಾಗರ: 1
Get In Touch With Us info@kalpa.news Whatsapp: 9481252093

















