ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ವ್ಯಕ್ತಿಯೊಬ್ಬನಿಗೆ 14 ವರ್ಷದ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಈ ಕುರಿತಂತೆ ತೀರ್ಪು ನೀಡಿರುವ ನ್ಯಾಯಾಲಯ ಶಿವಕುಮಾರ್ ಎಂಬ ವ್ಯಕ್ತಿಗೆ 14 ವರ್ಷ ಜೈಲು ಶಿಕ್ಷೆ, 25 ಸಾವಿರ ರೂ. ದಂಡ ವಿಧಿಸಿದೆ.
ಘಟನೆ ಹಿನ್ನೆಲೆ:
ಜೈಲ್ ಸರ್ಕಲ್ ಬಳಿಯ ಶ್ರೀ ದುರ್ಗಾ ಪರಮೇಶ್ವರಿ ದೇವಾಲಯದ ಅರ್ಚಕ ಶಿವಕುಮಾರ್ ಎಂಬಾರ 2016ರಲ್ಲಿ ದೇವಾಲಯಕ್ಕೆ ಬರುತ್ತಿದ್ದ ಅಪ್ರಾಪ್ತ ಬಾಲಕಿಗೆ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಬರುವಂತೆ ಮಾಡುತ್ತೇನೆ ಎಂದು ಆಮಿಷ ತೋರಿಸಿ, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ.
ಈ ಕುರಿತಂತೆ ಮಹಿಳಾ ಠಾಣೆಯಲ್ಲಿ ಅಪ್ರಾಪ್ತೆ ನೀಡಿದ್ದ ದೂರಿನ ಆಧಾರದಲ್ಲಿ ತನಿಖೆ ನಡೆದಿತ್ತು. ಆನಂತರ ಪೊಲೀಸರು ಸಲ್ಲಿಸಿದ ದೋಷಾರೋಪ ಪಟ್ಟಿ ಆಧಾರದಲ್ಲಿ ವಿಚಾರಣೆ ನಡೆಸಿದ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post