ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಾರನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ ಚಕ್ರಕ್ಕೆ ಸಿಲುಕಿ ಎರಡೂವರೆ ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ಕಡೇಕಲ್’ನಲ್ಲಿ ಈ ಘಟನೆ ನಡೆದಿದ್ದು, ಮೃತ ಬಾಲಕಿಯನ್ನು ಲೀಜಾ(2.5) ಎಂದು ಗುರುತಿಸಲಾಗಿದೆ.
ಇಲ್ಲಿನ ಶಮೀ ನವಾಜ್ ಎನ್ನುವವರು ತಮ್ಮ ಪತ್ನಿ, ಅತ್ತೆ ಹಾಗೂ ಕುಟುಂಬದ ಮಕ್ಕಳಿಬ್ಬರನ್ನು ಸೂಳೆಬೈಲಿನಿಂದ ಕಡೇಕಲ್’ಗೆ ಕರೆದುಕೊಂಡು ಬಂದಿದ್ದಾರೆ. ಮನೆಯ ಬಳಿ ಎಲ್ಲರನ್ನೂ ಇಳಿಸಿ ಕಾರನ್ನು ರಿವರ್ಸ್ ತೆಗೆದುಕೊಳ್ಳುವ ವೇಳೆ ಲೀಜಾ ಚಕ್ರಕ್ಕೆ ಸಿಲುಕಿ ಪ್ರಜ್ಞಾಹೀನಳಾಗಿದ್ದಾಳೆ. ತತಕ್ಷಣವೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಆ ವೇಳೆ ಮಗು ಅಸುನೀಗಿದೆ.
ತುಂಗಾ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post