ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆರರ ಬಾಲೆಯ ಮೇಲೆ ಅತ್ಯಾಚಾರಗೈದ ಆರೋಪಿಗಿಂದು ಶಿವಮೊಗ್ಗ ಜಿಲ್ಲಾ ನ್ಯಾಯಾಲಯವಿಂದು ಇಪತ್ತು ವರುಷ ಜೈಲು ಹಾಗೂ ಐವತ್ತು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಘಟನೆಯ ಸಮಗ್ರ ವಿವರ
2019ರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿಯಾದ ಲಿಂಗರಾಜ @ ನವೀನ 18 ವರ್ಷ ಈತನು 06 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದಾಗ, ಚಾಕಲೇಟ್ ಕೊಡುತ್ತೇನೆಂದು ಕರೆದುಕೊಂಡು ಹೋಗಿ ಆಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ.
ಈ ಕುರಿತ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ರೀತ್ಯಾ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಆಗಿನ ತನಿಖಾಧಿಕಾರಿಗಳಾದ ಯೋಗೇಶ್, ಸಿಪಿಐ ಭದ್ರಾವತಿ ಗ್ರಾಮಾಂತರ ವೃತ್ತ ರವರು ಸದರಿ ಪ್ರಕರಣದ ತನಿಖೆಯನ್ನು ಕೈಗೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ದೋಷಾರೋಪಣ ಪತ್ರವನ್ನು ಸಲ್ಲಿಸಿದ್ದರು. ವಿಚಾರಣೆಯಲ್ಲಿ ಆರೋಪಿಯ ಅಪರಾಧ ಸಾಬೀತಾಗಿದ್ದು, ಈತನಿಗೆ ಪೋಕ್ಸೋ ಕಾಯ್ದೆ ಅಡಿಯಲ್ಲಿ 20 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳ ಕಾಲ ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















