ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬೈಕ್ ಚಲಾಯಿಸುತ್ತಿದ್ದ ವೇಳೆಯೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಸಾವನ್ನಪ್ಪಿ, ಚರಂಡಿಗೆ ಬಿದ್ದ ಘಟನೆ ಹರಿಗೆ ಬಳಿಯಲ್ಲಿ ನಡೆದಿದೆ.
ಇಂದು ನಸುಕಿನಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ವ್ಯಕ್ತಿ ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು ಎಂದು ವರದಿಯಾಗಿದೆ.
ಹರಿಗೆಯ ವೈನ್ ಶಾಪ್ ಎದುರು ಬರುತ್ತಿದ್ದ ವೇಳೆ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಪರಿಣಾಮವಾಗಿ ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಿದ್ದು, ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















