ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೆಂಗಳೂರಿನಲ್ಲಿ ನಡೆದಿರುವ ವೋಟರ್ ಐಡಿ ಹಗರಣದ ಸಮಗ್ರ ತನಿಖೆಯಾಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ, ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ಹಲವರ ಶ್ರಮದಿಂದ ದೊರೆತ ಇಂತಹ ಪವಿತ್ರ ಹಕ್ಕನ್ನು ಕಿತ್ತುಕೊಳ್ಳುವ ಇಂತಹ ಕೃತ್ಯ ನಾಗರಿಕ ಸಮಾಜಕ್ಕೆ ಧಕ್ಕೆಯಾಗಿದೆ. ವೋಟರ್ ಐಡಿ ಹಗರಣ ಪ್ರಜಾಪ್ರಭುತ್ವವನ್ನು ಅಣಕಿಸುವಂತಹುದ್ದಾಗಿದ್ದು, ನಮ್ಮ ವ್ಯವಸ್ಥೆಗೆ ಬರೆದ ದ್ರೋಹವಾಗಿದೆ. ಇಂತಹ ತಪ್ಪನ್ನು ಯಾರೇ ಮಾಡಿದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post