ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸಮಾಜಕ್ಕೆ ಮಾರತವಾಗಿ ಕಾಡುತ್ತಿರುವ ಡ್ರಗ್ಸ್ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಎಬಿವಿಪಿ ವತಿಯಿಂದ ಪೋಸ್ಟ್ ಕಾರ್ಡ್ ಅಭಿಯಾನ ನಡೆಸಲಾಯಿತು.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಶಿವಮೊಗ್ಗ ಶಾಖೆ ವತಿಯಿಂದ ಶಿವಮೊಗ್ಗ ಜಿಲ್ಲಾ ಅಂಚೆ ಕಚೇರಿಯಲ್ಲಿ ಸಾಮೂಹಿಕ ಪತ್ರ ಅಭಿಯಾನ ನಡೆಸಲಾಯಿತು. ಡ್ರಗ್ಸ್ ಮಾಫಿಯಾವನ್ನು ಹತ್ತಿಕ್ಕಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಸಾಮೂಹಿಕ ಪತ್ರ ಬರೆಯುವ ಮೂಲಕ ಪೋಸ್ಟ್ ಕಾರ್ಡ್ ಚಳವಳಿ ನಡೆಸಲಾಯಿತು.
ಜಿಲ್ಲಾ ಸಂಚಾಲಕ್ ಮಂಜುನಾಥ್, ವಿವೇಕ್, ರಘು ವೀರ್ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post