No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
  • Advertise With Us
  • Grievances
  • About Us
  • Contact Us
Tuesday, July 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕಲ್ಲು ಗಣಿ ನಿರಾಕ್ಷೇಪಣಾ ಪತ್ರ ನೀಡಿದ ಅರಣ್ಯಾಧಿಕಾರಿಗಳ ವಿರುದ್ಧ ಕ್ರಮ: ಡಿಸಿ ಸೂಚನೆ

kalpa News by kalpa News
December 14, 2020
in Small Bytes, ಶಿವಮೊಗ್ಗ
0
ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಹೊಸನಗರ ತಾಲೂಕಿನ ಹುಂಚಾ ಮತ್ತು ಕುಂಭತ್ತಿ ಗ್ರಾಮಗಳಲ್ಲಿ ರದ್ದಾಗಿರುವ ಕಲ್ಲುಗಣಿ ಗುತ್ತಿಗೆಗಳನ್ನು ನಿಯಮಾನುಸಾರ ವಿಲೇ ಮಾಡಲು ನಿರಾಪೇಕ್ಷಣಾ ಪ್ರಮಾಣಪತ್ರ ನೀಡಿದ ಅಂದಿನ ಅರಣ್ಯಾಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲು ಅರಣ್ಯಾಧಿಕಾರಿಗಳಿಗೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಹಿರಿಯ ಭೂವಿಜ್ಞಾನಿ ಹಾಗೂ ಜಿಲ್ಲಾ ಮರಳು ಸಮಿತಿಯ ಸದಸ್ಯ ಕಾರ್ಯದರ್ಶಿ ರಾನಜಿನಾಯ್ಕ್‌ ಅವರಿಗೆ ಸೂಚಿಸಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಹಾಗೂ ಜಿಲ್ಲಾ ಕಲ್ಲುಪುಡಿ ಮಾಡುವ ಘಟಕಗಳ ಪರವಾನಿಗೆ ಹಾಗೂ ನಿಯಂತ್ರಣ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.


ಸದರಿ ಗ್ರಾಮಗಳಲ್ಲಿ ಕಲ್ಲುಗಣಿಗಾರಿಕೆಗೆ ಅನುಮತಿ ನೀಡಲು ಪರವಾನಿಗೆ ನೀಡಿ, ಹಿಂಪಡೆದ ಕಾರಣಕ್ಕೆ ಕಲ್ಲುಗಣಿಗಾರಿಕೆ ನಡೆಸದಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿತ್ತು. ಗುತ್ತಿಗೆ ರದ್ದುಪಡಿಸಿದ ಆದೇಶದ ಹಿನ್ನೆಲೆಯಲ್ಲಿ ಗಣಿಗಾರಿಕೆಗೆ ಗುತ್ತಿಗೆ ಪಡೆದ ಗುತ್ತಿಗೆದಾರರು ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದರು.

ಜಿಲ್ಲೆಯಾದ್ಯಂತ ಇರುವ ಮರಳು ಕ್ವಾರಿಗಳಲ್ಲಿ ಗಣಿಗಾರಿಕೆಯನ್ನು ಮಾನ್ಸೂನ್ ಮುಕ್ತಾಯಗೊಳ್ಳುವವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿತ್ತು. ಪ್ರಸ್ತುತ ಮಾನ್ಸೂನ್ ಮುಕ್ತಾಯಗೊಂಡಿರುವುದರಿಂದ ಗಣಿಗಾರಿಕೆ ಆರಂಭಿಸಲು ಅನುಮತಿ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಅದಕ್ಕಾಗಿ ಗಣಿಗಾರಿಕೆ ನಡೆಸುವ ಸ್ಥಳಗಳಲ್ಲಿ ಹಾಗೂ ಚೆಕ್‌ಪೋಸ್ಟ್‌ಗಳಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸಿರುವ ಬಗ್ಗೆ, ರಸ್ತೆ ಸಂಪರ್ಕ ಸಮರ್ಪಕವಾಗಿರುವ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾರರು ಖುದ್ದು ಭೇಟಿ ನೀಡಿ ಪರಿಶೀಲಿಸಿ ಅನುಮತಿ ನೀಡುವಂತೆ ಸೂಚಿಸಿದ ಅವರು, ಕ್ಯಾಮರಾ ಅಳವಡಿಕೆಗೆ ಮುನ್ನ ಪೊಲೀಸ್ ಇಲಾಖೆಯ ತಾಂತ್ರಿಕ ತಜ್ಞರ ನೆರವು ಪಡೆಯುವಂತೆ ಅವರು ಸೂಚಿಸಿದರು. ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಣೆ ಕುರಿತು ನಿಯಂತ್ರಣ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಕ್ಷಮ ಅಧಿಕಾರಿಗಳಿಗೆ ಬಾಡಿಗೆ ವಾಹನಗಳನ್ನು ಪಡೆದುಕೊಳ್ಳುವಂತೆ ಹಾಗೂ ಉಪವಿಭಾಗಾಧಿಕಾರಿಗಳು ತಹಶೀಲ್ದಾರರ ಸಭೆ ಕರೆದು ಕೂಡಲೆ ಕ್ರಮವಹಿಸುವಂತೆ ಅವರು ಸೂಚಿಸಿದರು.

ಹೊಸ ಮರಳು ನೀತಿ-2020 ಅನ್ವಯ ಮೊದಲನೆ, ಎರಡನೇ ಹಾಗೂ ಮೂರನೇ ಶ್ರೇಣಿಯ ಹಳ್ಳ, ತೊರೆಗಳಲ್ಲಿ ಮತ್ತು ಕೆರೆಗಳಲ್ಲಿ ಲಭ್ಯವಿರುವ ಮರಳು ನಿಕ್ಷೇಪಗಳನ್ನು ಗುರುತಿಸಿ ನಿಯಮಾನುಸಾರ ವಿಲೇ ಮಾಡಲು ಸೂಚಿಸಲಾಗಿತ್ತು. ಅದರಂತೆ ಶಿಕಾರಿಪುರ ತಾಲೂಕಿನ ಆರು ಸ್ಥಳಗಳಲ್ಲಿ ನಿಕ್ಷೇಪಗಳನ್ನು ಗುರುತಿಸಲಾಗಿದ್ದು, ಮರಳನ್ನು ವಿಲೇ ಮಾಡಲು ಸ್ಥಳೀಯ ಸಮಿತಿ ಅನುಮತಿ ನೀಡಿದ್ದು, ಅನುಮೋದನೆಗಾಗಿ ಜಿಲ್ಲಾ ಸಮಿತಿಗೆ ರವಾನಿಸಿದ್ದಾರೆ. ಉಳಿದ ತಾಲೂಕುಗಳಲ್ಲಿಯೂ ನಿಕ್ಷೇಪಗಳನ್ನು ಗುರುತಿಸಿ, ನಿಯಮಾನುಸಾರ ವಿಲೇ ಮಾಡಲು ಗಮನಹರಿಸುವಂತೆ ಅವರು ತಹಶೀಲ್ದಾರರಿಗೆ ಸೂಚಿಸಿದರು.

ಹೊಸ ಮರಳು ನೀತಿಯನ್ವಯ ತೀರ್ಥಹಳ್ಳಿ ತಾಲೂಕು ಲಿಂಗಾಪುರ ಗ್ರಾಮದ ವ್ಯಾಪ್ತಿಯ ತುಂಗಾ ಜಲಾಶಯದ ಹಿನ್ನೀರು ಪ್ರದೇಶದಲ್ಲಿ 30 ಎಕರೆ ವಿಸ್ತೀರ್ಣದಲ್ಲಿ ಮರಳು ಗಣಿಗಾರಿಕೆಗೆ ಬದಲಾಗಿ ಶೇಖರಣೆಗೊಂಡಿರುವ ಹೂಳಿನಲ್ಲಿ ದೊರಕುವ ಮರಳು ತೆಗೆದು ವಿಲೇವಾರಿ ಮಾಡುವ ಸಲುವಾಗಿ ಹಾಗೂ ಹೊಸ ಮರಳು ನೀತಿ ಅನುಷ್ಠಾನಕ್ಕೂ ಪೂರ್ವದಲ್ಲಿ ಮೊದಲ, ದ್ವಿತೀಯ ಹಾಗೂ ತೃತೀಯ ಹಂತದ ಹರಾಜು ಪ್ರಕ್ರಿಯೆಯಲ್ಲಿ ಯಶಸ್ವಿಯಾಗದ ಮರಳು ಬ್ಲಾಕ್‌ಗಳನ್ನು ಕೆ.ಎಸ್.ಎಂ.ಸಿ.ಎಲ್. ಬೆಂಗಳೂರು ಇವರಿಗೆ ಹಸ್ತಾಂತರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು, ಉಪವಿಭಾಗಾಧಿಕಾರಿಗಳಾದ ಟಿ.ವಿ. ಪ್ರಕಾಶ್, ಪ್ರಸನ್ನಕುಮಾರ್ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: hosanagarKannada News WebsiteLatest News KannadaLocal NewsMalnad NewsShimogaShivamoggaShivamogga NewsStone Miningಕಲ್ಲು ಗಣಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಹೊಸನಗರ
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬ್ರಾಹ್ಮಣ ಸಮಾಜಕ್ಕೆ ದಾರಿ ದೀಪವಾದ ಹೊಸಪೇಟೆಯ ಶ್ರೀ ಗಾಯತ್ರಿ ಪತ್ತಿನ ಸೌಹಾರ್ದ ಬ್ಯಾಂಕ್

Next Post

ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸದಸ್ಯರಾಗಿ ಭದ್ರಾವತಿಯ ಅವಿನಾಶ್ ನೇಮಕ

kalpa News

kalpa News

Next Post
ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸದಸ್ಯರಾಗಿ ಭದ್ರಾವತಿಯ ಅವಿನಾಶ್ ನೇಮಕ

ಬಿಜೆಪಿ ರಾಜ್ಯ ಮಾಧ್ಯಮ ವಿಭಾಗದ ಸದಸ್ಯರಾಗಿ ಭದ್ರಾವತಿಯ ಅವಿನಾಶ್ ನೇಮಕ

Leave a Reply Cancel reply

Your email address will not be published. Required fields are marked *

No Result
View All Result
Shivamogga Murder Case Cracked Quickly, Two Arrested
English Articles

Shivamogga Murder Case Cracked Quickly, Two Arrested

by kalpa News
July 21, 2026
0

Kalpa Media House  |  Shivamogga | A man who had come for timber cutting work and was residing in a...

Read moreDetails
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL