No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Thursday, October 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅನುಕಂಪ ಆಧಾರಿತ ನೇಮಕಾತಿ ವಿಳಂಬ ತಪ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶಿವಕುಮಾರ್

ಸರ್ಕಾರಿ ನೌಕರರಿಗೆ ಗುಣಮಟ್ಟದ ತರಬೇತಿ ನೀಡಲು ಸಿ.ಎಸ್. ಷಡಾಕ್ಷರಿ ಮನವಿ

kalpa News by kalpa News
January 15, 2021
in ಶಿವಮೊಗ್ಗ
0
ಅನುಕಂಪ ಆಧಾರಿತ ನೇಮಕಾತಿ ವಿಳಂಬ ತಪ್ಪಿಸಲು ಕ್ರಮ: ಜಿಲ್ಲಾಧಿಕಾರಿ ಶಿವಕುಮಾರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಜಿಲ್ಲೆಯಲ್ಲಿ ಅನುಕಂಪ ಆಧಾರಿತ ನೇಮಕಾತಿಗಳಲ್ಲಿ ತೀವ್ರಗತಿಯ ವಿಳಂಬವಾಗುತ್ತಿದ್ದು, ಸದರಿ ಪ್ರಕರಣದ ಕಡತಗಳನ್ನು ತ್ವರಿತವಾಗಿ ವಿಲೇ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಹೇಳಿದರು.

ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಇಲಾಖೆಯಲ್ಲಿ ಖಾಯಂ ಪೂರ್ವ ಸೇವಾವಧಿ ಘೋಷಣೆ, ಕಾಲಮಿತಿ ಬಡ್ತಿ ಮತ್ತು ವೇತನ ವಿಳಂಬವಾಗುತ್ತಿರುವ ಬಗ್ಗೆಯೂ ವಿವಿಧ ಇಲಾಖೆಗಳ ಅಧಿಕಾರಿ-ಸಿಬ್ಬಂಧಿಗಳು ಗಮನಕ್ಕೆ ತಂದಿದ್ದು, ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸಿಬ್ಬಂಧಿಗಳ ವೇತನ ಸಕಾಲದಲ್ಲಿ ಮಾಡುವಂತೆ ಸೂಚನೆ ನೀಡಲಾಗುವುದು ಎಂದರು.
ವಿವಿಧ ಇಲಾಖೆಗಳ ಕಟ್ಟಡಗಳಲ್ಲಿ ಶೌಚಾಲಯ ವ್ಯವಸ್ಥೆಯ ಕೊರತೆ, ಕಟ್ಟಡದ ಮೇಲ್ಭಾಗದಲ್ಲಿ ಗಿಡಗಂಟೆಗಳು ಬೆಳೆದಿರುವುದು, ಆವರಣದಲ್ಲಿ ಕಳೆ ಬೆಳೆದಿರುವುದು, ಕೊಠಡಿಗಳಲ್ಲಿ ಬಳಕೆಯಾಗದ ವಸ್ತುಗಳನ್ನು ಸಂಗ್ರಹಿಸಿರುವುದು, ಅನುಪಯುಕ್ತ ವಾಹನಗಳನ್ನು ವಿಲೇಮಾಡದೆ ಉಳಿಸಿಕೊಂಡಿರುವುದು, ಇಂತಹ ಹಲವು ಕಾರಣಗಳಿಂದ ಕಟ್ಟಡದ ಅಂದ ಹಾಳಾಗುತ್ತಿದೆ. ಇಂತಹವುಗಳಿಂದ ಕಟ್ಟಡಗಳನ್ನು ಸುಸ್ಥಿತಿಯಲ್ಲಿಡಲು, ಅನುಪಯುಕ್ತ ವಸ್ತುಗಳನ್ನು ವಿಲೆಮಾಡಲು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ಜಾಗ ಒತ್ತುವರಿಯಾಗುತ್ತಿರುವ ಪ್ರಕರಣಗಳು ಅಲ್ಲಲ್ಲಿ ಆಗಾಗ್ಗೆ ಕೇಳಿ ಬರುತ್ತಿವೆ. ಅದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡವನ್ನು ರಚಿಸಿ, ಸರ್ವೇ ಮಾಡಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಆರಂಭದ ಹಂತವಾಗಿ ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸೇರಿದಂತೆ ಆಯ್ದ ಹತ್ತು ಇಲಾಖೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ಮಾತನಾಡಿ, ನಿವೃತ್ತ ನೌಕರರ ಪಿಂಚಣಿ ಕಡತಗಳ ವಿಲೇವಾರಿಯಲ್ಲಿ ಅನಗತ್ಯವಾಗಿ ವಿಳಂಬವಾಗುತ್ತಿವೆ. ನೌಕರರ ಬಡ್ತಿ, ಜೇಷ್ಠತೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುವಂತೆ ಹಾಗೂ ಏಕಗವಾಕ್ಷಿ ಪದ್ದತಿಯಲ್ಲಿ ಪಿಂಚಣಿ ಕಡತಗಳನ್ನು ಇತ್ಯರ್ಥಪಡಿಸಲು ಮನವಿ ಮಾಡಿದರು.

ಕರ್ತವ್ಯ ನಿರತ ಕಂದಾಯ ಮತ್ತು ಅರಣ್ಯ ನೌಕರರ ಮೇಲೆ ಪ್ರಕರಣಗಳನ್ನು ದಾಖಲಿಸುವ ಮುನ್ನ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ನಂತರ ನಿರ್ಣಯ ಕೈಗೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಮನವಿ ಮಾಡಿದ ಅವರು, ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರು ತಮ್ಮ ಅಹವಾಲುಗಳನ್ನು ಸಲ್ಲಿಸಲು ಜಿಲ್ಲಾ ಕೇಂದ್ರಕ್ಕೆ ಬರುವುದನ್ನು ತಪ್ಪಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರಕ್ಕೆ ಹೋದಾಗ ಅಹವಾಲುಗಳನ್ನು ಆಲಿಸಬೇಕು. ಅದಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಕೇಂದ್ರಕ್ಕೆ ಭೇಟಿ ನೀಡುವ ದಿನಾಂಕವನ್ನು ಸಂಬಂಧಿಸಿದ ನೌಕರರಿಗೆ ತಿಳಿಸುವಂತೆ ಕೋರಿದರು.
ಜಿಲ್ಲೆಯಲ್ಲಿ ಗುರುಭವನ ನಿರ್ಮಾಣಕ್ಕೆ ಸರ್ಕಾರ ಈಗಾಗಲೇ 2 ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದು, ಕಟ್ಟಡ ನಿರ್ಮಿಸುವ ಸ್ಥಳದಲ್ಲಿನ ಹಳೆ ಕಟ್ಟಡವನ್ನು ನೆಲಸಮಗೊಳಿಸುವ ಕಾರ್ಯ ಬಾಕಿ ಉಳಿದಿದೆ. ಅಲ್ಲದೇ ಈ ಹಿಂದೆ ಅನೇಕ ಬಾರಿ ಮನವಿ ಮಾಡಲಾಗಿದೆ. ಈ ಸಂಬಂಧ ಕೂಡಲೇ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ-ಸಿಬ್ಬಂಧಿಗಳಿಗೆ ಗುಣಮಟ್ಟದ ತರಬೇತಿ ನೀಡಲು ಹಾಗೂ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಉತ್ತಮ ತರಬೇತಿಯನ್ನು ಆಯೋಜಿಸಲು ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿಗಳಲ್ಲಿ ವಿನಂತಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ನೌಕರರ ಸಂಘದ ಬೆಂಗಳೂರು ವಿಭಾಗದ ವಿಭಾಗೀಯ ಉಪಾಧ್ಯಕ್ಷ ಆರ್. ಮೋಹನ್‌ಕುಮಾರ್, ಐ.ಪಿ. ಶಾಂತರಾಜ್ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು, ತಾಲೂಕು ಸಂಘಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Compassion based recruitmentKannada News WebsiteLatest News KannadaLocal NewsMalnad NewsShimogaShivamoggaShivamogga Newsಅನುಕಂಪ ಆಧಾರಿತ ನೇಮಕಾತಿಗುರುಭವನಶಿವಮೊಗ್ಗ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮ ಮಂದಿರ ನಿರ್ಮಾಣಕ್ಕೆ ಸಕಲ ಹಿಂದೂಗಳು ಕೈಜೋಡಿಸಬೇಕು: ಎನ್. ಮಂಜುನಾಥ್

Next Post

ಉಕ್ಕಿನ ನಗರಿಗೆ ಅಭಿವೃದ್ಧಿಯ ಪರ್ವ ನಾಳೆಯಿಂದ ಆರಂಭವಾಗಲಿದೆ: ಸಂಸದ ರಾಘವೇಂದ್ರ

kalpa News

kalpa News

Next Post
ಉಕ್ಕಿನ ನಗರಿಗೆ ಅಭಿವೃದ್ಧಿಯ ಪರ್ವ ನಾಳೆಯಿಂದ ಆರಂಭವಾಗಲಿದೆ: ಸಂಸದ ರಾಘವೇಂದ್ರ

ಉಕ್ಕಿನ ನಗರಿಗೆ ಅಭಿವೃದ್ಧಿಯ ಪರ್ವ ನಾಳೆಯಿಂದ ಆರಂಭವಾಗಲಿದೆ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL