ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಗಮ ಮಂಡಳಿಗೆ ನೇಮಕ ಮಾಡುವ ಮೂಲಕ ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಪ್ರಾಧಾನ್ಯತೆ ನೀಡಲಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.
ವಿವಿಧ ನಿಗಮ ಮಂಡಳಿಗಳಿಗೆ ನಾಮನಿರ್ದೇಶಿತರಾದವರಿಗೆ ಬಿಜೆಪಿ ಕಚೇರಿಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿಂದೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನಿಗಮ ಮಂಡಳಿಗಳಿಗೆ ನೇಮಕಾತಿ ಮಾಡಲು ಸಾಧ್ಯವಾಗಿಲ್ಲ ಎಂದು ಕೊರಗಿದ್ದರು. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಸುಮಾರು73ಕ್ಕೂ ಅಧಿ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ ಎಂದರು.
ಈ ರೀತಿ ನಾಮನಿರ್ದೇಶಿತಗೊಂಡ ಸದಸ್ಯರುಗಳು ಈಗ ಘೋಷಣೆಯಾಗಿರುವ ಗ್ರಾಮ ಪಂಚಾಯ್ತಿ ಚುನಾವಣೆಯ ಜವಾಬ್ದಾರಿಗಳನ್ನು ಹೊತ್ತು, ಪಕ್ಷಕ್ಕಾಗಿ ದುಡಿಯಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಬುಡಾ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್, ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಪವಿತ್ರ ರಾಮಯ್ಯ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















