Read - < 1 minute
ಶಿವಮೊಗ್ಗ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಅನುರಾಧ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ.
ಅಪರ ಜಿಲ್ಲಾಧಿಕಾರಿಯಾಗಿದ್ದ ಚನ್ನಬಸಪ್ಪ ಅವರನ್ನು ತುಮಕೂರಿಗೆ ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ ಇವರ ಸ್ಥಾನಕ್ಕೆ ಅನುರಾಧ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಇಂದು ಅನುರಾಧ ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಶಿವಮೊಗ್ಗ ಮೂಲದವರಾದ ಅನುರಾಧ ಅವರು ಜೆಪಿಎನ್ ಕಾಲೇಜಿನಲ್ಲಿ ತಮ್ಮ ಶಿಕ್ಷಣವನ್ನು ಪೂರೈಸಿದ್ದರು.






Discussion about this post