ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ 2020-21ನೇ ಶೈಕ್ಷಣಿಕ ಸಾಲಿಗೆ ಎಂಎ ಕನ್ನಡ ಮತ್ತು ಅರ್ಥಶಾಸ್ತ್ರ ವಿಭಾಗಗಳಲ್ಲಿ ಪ್ರವೇಶಾತಿಗಾಗಿ ಕುವೆಂಪು ವಿಶ್ವವಿದ್ಯಾಲಯವು ಅಧಿಸೂಚನೆಯನ್ನು ಹೊರಡಿಸಿದೆ.
ಆಸಕ್ತ ವಿದ್ಯಾರ್ಥಿಗಳು ಅನ್ಲೈನ್ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವೆಬ್ಸೈಟ್ ವಿಳಾಸ: http://www.kuvempu.ac.in/admission2020-21 ಅರ್ಜಿಯಲ್ಲಿ ಶಿಕಾರಿಪುರ ಸ್ನಾತಕೋತ್ತರ ಕೇಂದ್ರ ಎಂದು ನಮೂದಿಸಲು ಸೂಚಿಸಿದೆ.
ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನಾಂಕವಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post