ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸಮಸ್ತ ಹಿಂದೂಗಳ ಆರಾಧ್ಯ ದೈವ ಪ್ರಭು ಶ್ರೀ ರಾಮಚಂದ್ರನ ಮಂದಿರ ನಿರ್ಮಾಣದ ಪುಣ್ಯ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಬಜರಂಗದಳದ ಜಿಲ್ಲಾ ಸಂಚಾಲಕ ದೀನದಯಾಳು ಕರೆ ನೀಡಿದ್ದಾರೆ.
ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಚಾಲನೆ ನೀಡಿ ಅವರು ಮಾತನಾಡಿದರು.
ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಈಗಾಗಲೇ ಕೋಟ್ಯಂತರ ಹಿಂದೂಗಳೂ ಭಾವನೆಗೆ ತಕ್ಕಂತೆ ಸೇವಾ ಕಾರ್ಯಗಳು ಆರಂಭವಾಗಿದೆ. ರಾಮನ ಅಳಿಲು ಸೇವೆ ಮಾಡಲು ನಮ್ಮೆಲ್ಲರಿಗೂ ದೊರೆತಿರುವ ಅದೃಷ್ಠ. ಇಂತಹ ಕಾರ್ಯಕ್ಕೆ ಪ್ರತಿಯೊಬ್ಬರೂ ತನು ಮನ ಧನ ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ರಾಮಣ್ಣ ಶ್ರೇಷ್ಠಿ ಪಾರ್ಕ್ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.










Discussion about this post