ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ವ್ಯಾಪ್ತಿಯಲ್ಲಿ ನಿಯಮಾನುಸಾರ ಸಂಜೆಯ ನಂತರವೂ ಸಹ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಪತ್ರ ಅರ್ಪಿಸಿದೆ.
ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ನೇತೃತ್ವದ ನಿಯೋಗ ಇಂದು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದು, ಶಿವಮೊಗ್ಗ ನಗರದಲ್ಲಿ ಬುಧವಾರದಿಂದ ಸಂಜೆಯ ನಂತರ ವ್ಯಾಪಾರ-ವಹಿವಾಟಿಗೆ ಪೊಲೀಸರು ಅವಕಾಶ ನಿರಾಕರಿಸುತ್ತಿದ್ದು, ಇದರಿಂದ ವರ್ತಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ. ನಿಯಮಾನುಸಾರ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡಬೇಕು ಎಂದು ಕೋರಲಾಗಿದೆ.
ಸಂಜೆಯ ನಂತರ ವ್ಯಾಪಾರ-ವಹಿವಾಟಿಗೆ ನಿರ್ಬಂಧ ಹಾಕುತ್ತಿರುವುದರಿಂದ ಉದ್ದಿಮೆದಾರರಿಗೆ ಅಪಾರ ನಷ್ಟ ಉಂಟಾಗುತ್ತಿದೆ. ಸದ್ಯ ನಗರದಲ್ಲಿ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಕಾನೂನು-ಸುವ್ಯವಸ್ಥೆ ನಿಯಂತ್ರಣದಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಜೆಯ ನಂತರವೂ ವ್ಯಾಪಾರ ವಹಿವಾಟಿಗೆ ನಿಯಮಾನಸಾರ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.
ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್, ಸಹ ಕಾರ್ಯದರ್ಶಿ ಜಿ. ವಿಜಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post