ಕಲ್ಪ ಮೀಡಿಯಾ ಹೌಸ್ | ಜೋಗ(ಕಾರ್ಗಲ್) |
ವಿಶ್ವ ವಿಖ್ಯಾತ ಜೋಗ ಜಲಪಾತದಲ್ಲಿ #Jogfalls ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳು ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಈ ಕುರಿತಂತೆ ಜೋಗ ಅಭಿವೃದ್ಧಿ ಪ್ರಾಧಿಕಾರದ #JogDevelopmentAuthority ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
Also read: ವಕ್ಫ್ ಮಂಡಳಿ ಕುರಿತು ಉತ್ತರ ನೀಡಲು ಸರ್ಕಾರ ಸಿದ್ಧವಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಜೋಗವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಹಲವು ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆ ಆಗಬಾರದು ಎಂದು ಪ್ರವೇಶ ನಿರ್ಬಂಧಿಸಲಾಗಿದೆ.
ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-251444 ನ್ನು ಸಂಪರ್ಕಿಸಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post