ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ನಾಗೇಶ್ ಎನ್ನುವವರ ಮೇಲೆ ದುಷ್ಕರ್ಮಿಗಳು ಇಂದು ಮುಂಜಾನೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರನ್ನು ಮೆಟ್ರೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮುಂಜಾನೆ 6 ಗಂಟೆ ವೇಳೆಯಲ್ಲಿ ನಾಗೇಶ್ ಅವರು ದೀಪಕ್ ಪೆಟ್ರೋಲ್ ಬಂಕ್ ಪಕ್ಕದ ರಸ್ತೆಯ ಉರ್ದು ಶಾಲೆ ಬಳಿ ಆಟೋ ಹತ್ತುತ್ತಿದ್ದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಇದರಿಂದ ತೀವ್ರವಾಗಿ ಗಾಯಗೊಂಡ ನಾಗೇಶ್ ಅವರನ್ನು ಮೆಟ್ರೋ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಬಜರಂಗದಳ ಜಿಲ್ಲಾ ಸಂಚಾಲಕ ದಯಾಳು, ಪ್ರಮುಖರಾದ ಎಸ್.ಎನ್. ಚನ್ನಬಸಪ್ಪ ಸೇರಿದಂತೆ ಪ್ರಮುಖರು ಆಸ್ಪತ್ರೆ ಭೇಟಿ ನೀಡಿದ್ದಾರೆ.
ಹಲ್ಲೆ ನಡೆಸಲು ಕಾರಣವೇನು ಎಂಬುದು ತಿಳಿದುಬಂದಿಲ್ಲ. ಪೋಲಿಸರು ತನಿಖೆ ಕೈಗೊಂಡಿದ್ದಾರೆ.










Discussion about this post