ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದ ಬೆನ್ನೆಲ್ಲೇ ಚೋರ್ ಬಜಾರ್’ನಲ್ಲಿ ಮೂವರ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಗಾಂಧಿ ಬಜಾರ್ ಪ್ರಕ್ಷುಬ್ದಗೊಂಡಿದೆ.
ಇಂದು ಮಧ್ಯಾಹ್ನದ ವೇಳೆಗೆ ಪಾರ್ಕಿಂಗ್ ವಿಚಾರದಲ್ಲಿ ಕೆಲವರ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆಯೇ ಚೋರ್ ಬಜಾರ್’ನಲ್ಲಿ ಮೂವರು ವ್ಯಾಪಾರಸ್ಥರ ಮೇಲೆ ಹಲ್ಲೆ ನಡೆದಿದೆ ಎಂದು ಹೇಳಲಾಗಿದೆ.
ಇದರಿಂದಾಗಿ ಇಡಿಯ ಗಾಂಧಿ ಬಜಾರ್’ನಲ್ಲಿ ವಿಚಾರ ಹರಡಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದ್ದು, ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಯಿತು. ಇದೇ ವೇಳೆ ರಾಮಣ್ಣಶ್ರೇಷ್ಠಿ ಪಾರ್ಕ್ ಬಳಿಯಲ್ಲಿ ದುಷ್ಕರ್ಮಿಗಳು ಆಟೋವೊಂದನ್ನು ಜಖಂಗೊಳಿಸಿದ್ದಾರೆ.
ವಿಷಯ ತಿಳಿದು ಸ್ವತಃ ಎಸ್’ಪಿ ಶಾಂತರಾಜು, ಡಿವೈಎಸ್’ಪಿ ಉಮೇಶ್ ನಾಯ್ಕ್, ಸಿಪಿಐ ವಸಂತ್ ಕುಮಾರ್ ಹಾಗೂ ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಚೋರ್ ಬಜಾರ್’ನಲ್ಲಿದ್ದ ವ್ಯಾಪಾರಸ್ಥರು ಹಾಗೂ ಗ್ರಾಹಕರನ್ನು ಸುರಕ್ಷಿತವಾಗಿ ಹೊರಕ್ಕೆ ಕಳುಹಿಸಿ, ಇಡಿಯ ಗಾಂಧಿ ಬಜಾರನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post