ಕಲ್ಪ ಮೀಡಿಯಾ ಹೌಸ್
ಭದ್ರಾವತಿ: ಭದ್ರಾ ಜಲಾಶಯ ತುಂಬುವ ಹಂತಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹೊರಕ್ಕೆ ಬಿಡುತ್ತಿರುವ ಪರಿಣಾಮ ಭದ್ರಾ ನದಿ ಉಕ್ಕಿ ಹರಿಯುತ್ತಿದೆ.
ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಸಿರುವ ಕಾರಣ ಭದ್ರೆ ತುಂಬಿ ಹರಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ನಿಲ್ದಾಣದ ಬಳಿಯಿರುವ ಹೊಸ ಸೇತುವೆ ಮೇಲ್ಬಾಗದ ಸನಿಹದಲ್ಲಿ ನೀರು ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸೇತುವೆಯನ್ನು ಬಂದ್ ಮಾಡಲಾಗಿದೆ.
ಇಂದು ರಾತ್ರಿ ವೇಳೆಗೆ ಸೇತುವೆಯ ಎರಡೂ ಕಡೆಗಳಲ್ಲಿ ಬ್ಯಾರಿಕೇಟ್ ಅಳವಡಿಸಿ ಬಂದ್ ಮಾಡಲಾಗಿದ್ದು, ಯಾವುದೇ ವಾಹನ ಸಂಚಾರಕ್ಕೆ ಮಾತ್ರವಲ್ಲ ಯಾರೂ ಸೇತುವೆ ಮೇಲೆ ತೆರಳದಂತೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post