ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹಳೇನಗರ ಕನಕ ಮಂಟಪದ ಬಳಿಯಿರುವ ಸರ್ಕಾರಿ ಉರ್ದು ಶಾಲೆಯ ಅಭಿವೃದ್ಧಿಗೆ 10 ಲಕ್ಷ ರೂ.ಗಳ ಅನುದಾನವನ್ನು ಘೋಷಣೆ ಮಾಡಲಾಗಿದೆ.
ಈ ಶಾಲೆಯಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಕೊರತೆಯಿರುವ ಬಗ್ಗೆ ಅಮ್ ಆದ್ಮಿ ಪಕ್ಷದ ಮುಖಂಡರು ನಗರಸಭೆ ಆಯುಕ್ತ ಮನೋಹರ್ ಅವರ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಆಯುಕ್ತರು ಎಎಪಿ ಮುಖಂಡರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವಿಚಾರವನ್ನು ಶಾಸಕ ಬಿ.ಕೆ. ಸಂಗಮೇಶ್ವರ ಅವರಿಗೆ ಆಯುಕ್ತರು ಮನವರಿಕೆ ಮಾಡಿಕೊಟ್ಟರು. ತತಕ್ಷಣವೇ 10 ಲಕ್ಷ ರೂ.ಗಳ ಅನುದಾನವನ್ನು ಘೋಷಣೆ ಮಾಡಿದ್ದು, ಶೌಚಾಲಯ ನಿರ್ಮಾಣ ಹಾಗೂ ಇತರೆ ಕೆಲಸಕ್ಕೂ ಅವಶ್ಯಕತೆ ಇರುವ ಹಣ ನೀಡಲಾಗುವುದು ಎಂದು ಆಯುಕ್ತರು ತಿಳಿಸಿದರು.
ಯಾವುದೇ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ನಗರಸಭೆ ನೆರವು ನೀಡಲಿದ್ದೇವೆ ಮಕ್ಕಳ ವಿದ್ಯಾಭ್ಯಾಸ ಮಾಡಿದರೇ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಆಯುಕ್ತರು ತಿಳಿಸಿದ್ದಾರೆ.
ಶಿಕ್ಷಣ ಇಲಾಖೆಯ ಗಣೇಶ್, ಎಎಪಿ ಜಿಲ್ಲಾ ಅಧ್ಯಕ್ಷ ರವಿಕುಮಾರ್, ಜಾವೇದ್, ಇಬ್ರಾಹಿಂಮ್, ಖದಿರ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯರು ಸೇರಿದಂತೆ ಶಿಕ್ಷಕರು ಹಾಗೂ ಸಿಬ್ಬಂದಿಗಳು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post