ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ದಸರಾ ಹಬ್ಬಕ್ಕೆ ಕ್ಷೇತ್ರದ ಜನರಿಗೆ ಭರ್ಜರಿ ಗಿಫ್ಟ್ ನೀಡಿರುವ ಶಾಸಕ ಬಿ.ಕೆ. ಸಂಗಮೇಶ್ವರ್ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗಳಿಗಾಗಿ 400 ಕೋಟಿ ರೂ.ಗೂ ಅಧಿಕ ಬೃಹತ್ ಅನುದಾನವನ್ನು ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿ ವಿವರ ನೀಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾವು ಕಂಕಣಬದ್ದವಾಗಿದ್ದು, ಕೋವಿಡ್19 ಸೋಂಕಿನಿಂದ ಗುಣಮುಖನಾದ ನಂತರ ಬೆಂಗಳೂರಿನಲ್ಲಿ ವಿಶ್ರಾಂತಿ ಪಡೆಯಲಿಲ್ಲ. ನನಗೆ ಕ್ಷೇತ್ರದ ಅಭಿವೃದ್ಧಿಯೇ ಮುಖ್ಯವಾಗಿದ್ದು, ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲ ಮುಖ್ಯಮಂತ್ರಿಗಳು, ಸಚಿವರು ಹಾಗೂ ಅಧಿಕಾರಿಗಳ ಬಳಿ ತೆರಳಿ 1 ವರ್ಷದಿಂದ ಬಾಕಿಯಿದ್ದ ಯೋಜನೆಗಳನ್ನು ಮಂಜೂರು ಮಾಡಿಸಿದ್ದೇವೆ ಎಂದರು.
ನಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಇಷ್ಟು ದೊಡ್ಡ ಮಟ್ಟದ ಅನುದಾನ ಬಿಡುಗಡೆ ಮಾಡುವಲ್ಲಿ ಸಹಕಾರ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ಇಲಾಖೆಯ ಅಧಿಕಾರಿಗಳಿಗೆ ಕ್ಷೇತ್ರದ ಜನತೆಯ ಪರವಾಗಿ ಹಾಗೂ ವೈಯಕ್ತಿಕವಾಗಿ ತುಂಬು ಹೃದಯದ ಧನ್ಯವಾದ ಅರ್ಪಿಸುತ್ತೇನೆ ಎಂದರು.
ಯಾವೆಲ್ಲಾ ಕಾಮಗಾರಿಗಳಿಗೆ ಎಷ್ಟು ಹಣ ಬಿಡುಗಡೆಯಾಗಿದೆ? ಇಲ್ಲಿದೆ ವಿವರ:
- ಕೋಡಿ ಹಳ್ಳಿ ಮಾಕ್ ಡ್ರೈನೇಜ್ ನಿರ್ಮಾಣಕ್ಕೆ 2 ಕೋಟಿ ರೂ.
- ಸೀತಾರಾಂಪುರದಿಂದ ತಳ್ಳಿಕಟ್ಟೆ, ಕುಮರಿ ನಾರಾಯಣಪುರ ಮಾರ್ಗವಾಗಿ ಪಿಎಂಎಎಸ್’ವೈ ಯೋಜನೆ ಅಡಿಯಲ್ಲಿ 5.5 ಕಿಮೀ ರಸ್ತೆಗೆ 5 ಕೋಟಿ ರೂ. ಮಂಜೂರು(ಟೆಂಡರ್ ಆಗಿದೆ)
- ವೀರಾಪುರದಿಂದ ಕುಮಾರನಹಳ್ಳಿ, ಜಯನಗರ ಕಾಚಗೊಂಡನಹಳ್ಳಿಗೆ ಸಂಪರ್ಕಿಸುವ 5 ಕಿಮೀ ರಸ್ತೆಗೆ 5 ಕೋಟಿ ರೂ.
- ಡೈರಿ ಸರ್ಕಲ್’ನಿಂದ ಮಜ್ಜಿಗೇನಹಳ್ಳಿ, ಕೆರೆಕೋಡಿ ಸರ್ಕಲ್, ಬಿಳಕಿ ರಸ್ತೆ ಮೂಲಕ ನವುಲೆ ಬಸಾಪುರ ಮಾರ್ಗದ 4.8 ಕಿಮೀ ರಸ್ತೆಗೆ 4 ಕೋಟಿ 27 ಲಕ್ಷ ರೂ. ಬಿಡುಗಡೆ (ಟೆಂಡರ್ ಆಗಿದೆ)
- ನೆರೆ ಹಾವಳಿಯಿಂದಾಗಿ ಕಾಗೆಕೋಡಮಗ್ಗಿ, ತಮ್ಲಾಪುರ, ಹೊಸೂರು, ಅರಳಿಹಳ್ಳಿ, ರೆಡ್ಡಿ ಕ್ಯಾಂಪ್ ರಸ್ತೆಗೆ 2 ಕೋಟಿ ರೂ. ಅನುದಾನ
- ಗೋಣಿಬೀಡಿನಿಂದ ಕಂಬದಾಳು ಹೊಸೂರು ಮೂಲಕ 45 ಕೆರೆಗಳಿಗೆ ನೀರು ತುಂಬಿಸುವ ಬೃಹತ್ ಯೋಜನೆಗೆ 45 ಕೋಟಿ ರೂ. ಅನುದಾನ (ಟೆಂಡರ್ ಆಗಿದೆ)
- ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಈ ಹಿಂದೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ತಡೆ ಹಿಡಿದಿದ್ದ 8 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಿಸಲಾಗಿದೆ
- ಗೊಂದಿ ಸೇತುವೆಯಿಂದ ಕರಕ್ಕುಚ್ಚಿ ಮಾರ್ಗದ ನಾಲೆಗೆ ಸೇತುವೆ ನಿರ್ಮಾಣಕ್ಕೆ 9 ಕೋಟಿ 99 ಲಕ್ಷ ರೂ. ಅನುಮೋದನೆ
- ಭದ್ರಾ ಅಣೆಕಟ್ಟೆ ಮುಂಭಾಗದಲ್ಲಿ ಮಿನಿ ಬೃಂದಾವನ ನಿರ್ಮಾಣಕ್ಕೆ 2 ಕೋಟಿ ರೂ. ಅನುದಾನ
- ದೊಣಬಘಟ್ಟ ಏತ ನೀರಾವರಿ ಯೋಜನೆ ಜಾರಿಗಾಗಿ 4.5 ಕೋಟಿ ರೂ. ಅನುದಾನ
- ನಗರಸಭೆ ವತಿಯಿಂದ ನಗರದ ವಿವಿಧ ಭಾಗಗಳಲ್ಲಿ ಬಾಕಿ ಉಳಿದಿದ್ದ ಯುಜಿಡಿ ಕಾಮಗಾರಿಗಾಗಿ 21.06 ಕೋಟಿ ರೂ. ಅನುದಾನ
- ದೊಣಬಘಟ್ಟದಿಂದ ಬಾಬಳ್ಳಿ, ಹೊಳೆಹೊನ್ನೂರು ಸೇತುವೆ ನಿರ್ಮಾಣಕ್ಕೆ 25 ಕೋಟಿ 40 ಲಕ್ಷ ರೂ. ಅನುದಾನ
- ಕೆಎಸ್’ಆರ್’ಟಿಸಿ ಡಿಪೋ ಹಿಂಭಾಗದ ಸಿದ್ದಾರೂಢನಗರದ ಅಭಿವೃದ್ಧಿಗೆ 18 ಕೋಟಿ ರೂ. ಹೆಚ್ಚುವರಿ ಅನುದಾನ
- ಬಿಎಚ್ ರಸ್ತೆಯಲ್ಲಿರುವ ಮಾರುತಿನಗರ ಮುಂಭಾಗದಲ್ಲಿರುವ ಕಿರಿದಾದ ಸೇತುವೆ ಅಗಲೀಕರಣ/ನಿರ್ಮಾಣಕ್ಕೆ 1 ಕೋಟಿ 20 ಲಕ್ಷ ರೂ. ಅನುದಾನ
- ಹೊಳೆಹೊನ್ನೂರು ರಸ್ತೆಯ ಕಾಗೆಕೋಡಮಗ್ಗೆ ಬಳಿಯಲ್ಲಿ ರಸ್ತೆಯಲ್ಲಿರುವ ತಗ್ಗು ರಸ್ತೆಯನ್ನು ಎತ್ತರಿಸುವ ಕಾಮಗಾರಿಗಾಗಿ 70 ಲಕ್ಷ ರೂ. ಅನುದಾನ
- ಬಾರಂದೂರು ಕುಂಬಾರಗುಂಡಿ, ಬೊಮ್ಮೇನಹಳ್ಳಿಗೆ ಸಂಪರ್ಕಿಸುವ ಕಾಂಕ್ರಿಟ್ ರಸ್ತೆ ಕಾಮಗಾರಿಗಾಗಿ 60 ಲಕ್ಷ ರೂ. ಅನುದಾನ
- ಕುಮಾರನಹಳ್ಳಿ ಕೆರೆಯ ಅಭಿವೃದ್ಧಿಗಾಗಿ 65 ಲಕ್ಷ ರೂ. ಅನುದಾನ
- ಸಿರಿಯೂರು-ಕಲ್ಲಹಳ್ಳಿ-ಹಾಗಲಮನೆ ರಸ್ತೆಯಲ್ಲಿನ ಕಿರು ಸೇತುವೆ ಮರು ನಿರ್ಮಾಣಕ್ಕೆ 35 ಲಕ್ಷ ರೂ. ಅನುದಾನ
- ಜಯಶ್ರೀ ಸರ್ಕಲ್, ಜನ್ನಾಪುರ, ಮಲ್ಲೇಶ್ವರ ಸಮುದಾಯ ಭವನ, ಜಿಂಕ್ ಲೈನ್ ಮಾರ್ಗವಾಗಿ ಪಿಡಬ್ಲ್ಯೂಡಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಗಾಗಿ 2 ಕೋಟಿ ರೂ. ಅನುದಾನ
- ಗುಣಿನರಸೀಪುರದ ಕಾಂಕ್ರಿಟ್ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂ. ಅನುದಾನ
- ಕಾರೆಹಳ್ಳಿಯಲ್ಲಿ ಕಾಂಕ್ರಿಟ್ ರಸ್ತೆ ಅಭಿವೃದ್ಧಿಗೆ 30 ಲಕ್ಷ ರೂ. ಅನುದಾನ
- ಎರೆಹಳ್ಳಿ ಪಂಚಾಯ್ತಿ ವ್ಯಾಪ್ತಿಯ ರಸ್ತೆ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ
- ನೀರಾವರಿ ಇಲಾಖೆಯಿಂದ ಭದ್ರಾ ಕಾಲೋನಿ, ಕಬಳಿಕಟ್ಟೆ, ಗುಂಡಪ್ಪ ಕ್ಯಾಂಪ್’ವರೆಗಿನ ಕಾಂಕ್ರಿಟ್ ರಸ್ತೆ ಅಭಿವೃದ್ಧಿಗೆ 1 ಕೋಟಿ ರೂ. ಅನುದಾನ
- ಶಂಕರ್ ಟಾಕೀಸ್ ಬಳಿ ವಿಶ್ವಸ್ವರೂಪಿಣಿ ದೇವಾಲಯದ ಸನಿಹ ನದಿಗೆ ತಡೆಗೋಡೆ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ
ಬಡವರಿಗೆ ಮನೆ ನಿರ್ಮಾಣಕ್ಕೆ 200 ಕೋಟಿ ರೂ.ಗೂ ಅಧಿಕ ಅನುದಾನ
ಅತ್ಯಂತ ಪ್ರಮುಖವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಬಡವರಿಗೆ 4 ಸಾವಿರ ಮನೆಗಳ ಸೂರು ನಿರ್ಮಾಣಕ್ಕಾಗಿ 200 ಕೋಟಿ ರೂ.ಗೂ ಬೃಹತ್ ಮೊತ್ತದ ಅನುದಾನವನ್ನು ತರುವಲ್ಲಿ ಶಾಸಕರು ಯಶಸ್ವಿಯಾಗಿದ್ದಾರೆ.
ಇನ್ನು, ಬಸ್ ನಿಲ್ದಾಣದಿಂದ ಬಿಳಕಿ ಕ್ರಾಸ್’ವರೆಗೂ ರಸ್ತೆ ಅಗಲೀಕರಣಕ್ಕೆ 30 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಅನುಮೋದನೆ ದೊರೆಯುವ ನಿರೀಕ್ಷೆಯಿದ್ದು, ಇನ್ನೂ ಹತ್ತಾರು ಪ್ರಸ್ತಾವನೆಗಳನ್ನು ಶಾಸಕರು ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ, ಪ್ರಮುಖರಾದ ಬಿ.ಟಿ. ನಾಗರಾಜ್, ಚನ್ನಪ್ಪ, ಅಣ್ಣೋಜಿ, ಬಾಲಣ್ಣ, ರಮೇಶ್ ನಾಯಕ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post