ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಲೆನಾಡು ಭಾಗದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕ್ರಸ್ಟ್ ಗೇಟ್ ಮೂಲಕ ನೀರನ್ನು ನದಿಗೆ ಹರಿಸಲಾಗಿದೆ.
ಕ್ರಸ್ಟ್ ಗೇಟ್ ಮೂಲಕ ಮಧ್ಯಾಹ್ನ 3300 ಕ್ಯೂಸೆಕ್ಸ್ ನೀರು ಹರಿಸಲಾಗಿತ್ತು. ಆನಂತರ ಸಂಜೆ 6 ಗಂಟೆ ವೇಳೆಗೆ ಒಟ್ಟು 6600 ಕ್ಯೂಸೆಕ್ಸ್’ಗೆ ಹೊರಹರಿವನ್ನು ಏರಿಕೆ ಮಾಡಲಾಗಿದೆ.
ಇನ್ನು, ರಿವರ್ ಬೆಡ್ ಮೂಲಕ 1 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post