ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೊರೋನಾದಂತಹ ಸಂಕಷ್ಟದ ಸಮಯದಲ್ಲೂ ಸಹ ಎಸ್’ಎಸ್’ಎಲ್’ಸಿ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಕಾರ್ಯ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು.
ಕನ್ನಡ ರಾಜ್ಯೋತ್ಸವ ಹಾಗೂ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ 125 ಅಂಕ ಗಳಿಸಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಬಸವೇಶ್ವರ ಧರ್ಮಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಉದ್ಘಾಟಿಸಿ ಅವರು ಮಾತನಾಡಿದರು.
ಕೊರೋನಾ ಸಂಕಷ್ಟ ಇಡಿಯ ದೇಶದ ಎಲ್ಲ ಕ್ಷೇತ್ರವನ್ನೂ ಸಂಕಷ್ಟಕ್ಕೆ ದೂಡಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಸಹ ಕಷ್ಟಪಟ್ಟು ಓದಿ, ಕನ್ನಡ ಮಾಧ್ಯಮದಲ್ಲಿ 125 ಅಂಕ ಗಳಿಸಿರುವುದು ಶ್ಲಾಘನೀಯವಾಗಿದೆ. ಈ ಮಕ್ಕಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಆಯುಕ್ತ ಮನೋಹರ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ಬಸವೇಶ್ವರ ಧರ್ಮ ಸಂಸ್ಥೆಯ ಶಿವಕುಮಾರ್, ಅಪೇಕ್ಷಾ ಮಂಜುನಾಥ್, ಖ್ಯಾತ ವೈದ್ಯೆ ಡಾ.ವೀಣಾ ಭಟ್, ಪ್ರಮುಖರಾದ ನಾಸಿರ್ ಖಾನ್, ಬಿ.ಟಿ. ನಾಗರಾಜ್, ನಿಕಟಪೂರ್ವ ಅಧ್ಯಕ್ಷ ನಾಗಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post