ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಸರ್ವ ಜನಾಂಗದ ಶಾಂತಿಯ ತೋಟ ಎಂಬಂತೆ ಎಲ್ಲ ಸಮುದಾಯಗಳಂತೆ ಬ್ರಾಹ್ಮಣ ಸಮುದಾಯದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಶಾಸಕ ಬಿ.ಕೆ. ಸಂಗಮೇಶ್ವರ್ ಹೇಳಿದರು.
ಹಳೇನಗರದ ಶ್ರೀ ರಾಮೇಶ್ವರ ಹಾಗೂ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ಶಂಕರ ಸಭಾಭವನಕ್ಕೆ ಆರ್’ಸಿಸಿ ಹಾಗೂ 25 ಲಕ್ಷ ರೂ. ವೆಚ್ಚದಲ್ಲಿ ಪಾಕ ಶಾಲೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಸದಾ ಸಮಾಜದ ಒಳಿತನ್ನು ಬಯಸುವ ವಿಪ್ರ ಬಂಧುಗಳ ಕೊಡುಗೆ ಬಹಳಷ್ಟಿದೆ. ಇಂತಹ ಬ್ರಾಹ್ಮಣ ಸಮುದಾಯದ ಹಿತ ಕಾಯಲು ತಾವು ಸದಾ ಬದ್ದವಾಗಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ಪ್ರಭಾಕರ್, ಪಕ್ಷದ ಪದಾಧಿಕಾರಿಗಳು, ದೇವಾಲಯ ಅಧ್ಯಕ್ಷ ಆನಂದ ರಾವ್, ಶ್ರೀಶಂಕರ ಸಭಾಭವನದ ಅಧ್ಯಕ್ಷ ಕೆ. ರಾಮರಾವ್, ರಮಾಕಾಂತ್ ಸೇರಿದಂತೆ ಬ್ರಾಹ್ಮಣ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post