ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಗರದ ಅಂಬೇಡ್ಕರ್ ವೃತ್ತವನ್ನು ಅಭಿವೃದ್ಧಿ ಪಡಿಸಿ ಹೆಚ್ಚಿನ ಅನುದಾನ ಬಳಸಿ ಹೊಸದಾಗಿ 12 ಅಡಿ ಎತ್ತರದ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಒತ್ತಾಯಿಸಿದರು.

ಅವರು ಅಂಬೇಡ್ಕರ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಶಾಸಕ ಬಿ.ಕೆ. ಸಂಗಮೇಶ್ವರ್, ಗ್ರೇಡ್-2 ತಹಶೀಲ್ದಾರ್ ರಂಗಮ್ಮ ಹಾಗೂ ನಗರಸಭೆ ಪೌರಾಯುಕ್ತ ಮನೋಹರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.
ಅಂಬೇಡ್ಕರ್ ವೃತ್ತದ ರಸ್ತೆಯ ಒಂದು ಬದಿಯಲ್ಲಿ ಪ್ರತಿಭಟನೆ ನಡೆಸಲು ಜಾಗ ಮೀಸಲಿರಿಸಬೇಕು, ಲೋಟಸ್ ಬಾರ್ ಸ್ಥಳಾಂತರಿಸಬೇಕು, ಗೂಡಂಗಡಿಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣದ ಮೂಲಕ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ಚಿನ್ನಯ್ಯ, ತಾಲೂಕು ಸಂಚಾಲಕ ಕೆ. ರಂಗನಾಥ, ಸಂಘಟನಾ ಸಂಚಾಲಕ ಕೆ. ಸುರೇಶ್, ಮುಖಂಡರುಗಳಾದ ಈಶ್ವರಪ್ಪ, ಕಾಣಿಕ್ ರಾಜ್, ಕುಪ್ಪುಸ್ವಾಮಿ ಮುಂತಾದವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















