ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮನೆಯವರು ಊರಿಗೆ ಹೋದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಬಂಗಾರ ಮತ್ತು ಹಣ ಕಳುವು ಮಾಡಿರುವ ಘಟನೆ ಸೋಮವಾರ ನಗರದ ಜನ್ನಾಪುರ ಬಡಾವಣೆಯಲ್ಲಿ ನಡೆದಿದೆ.
ಜನ್ನಾಪುರದ ರಾಮಚಂದ್ರ ಎಂಬುವವರು ಊರಿಗೆ ಹೋದ ಸಂದರ್ಭದಲ್ಲಿ ಮನೆಯ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಬಂಗಾರದ ಒಡವೆ ಹಾಗೂ ನಗದು ಕಳುವಾಗಿದೆ ಎಂದು ಮನೆಯ ಮಾಲಕರು ನ್ಯೂಟೌನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಮೇರೆಗೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಸದರಿ ಮನೆಯ ಸುತ್ತಮುತ್ತಲಿನ ಸಿಸಿಕ್ಯಾಮೆರಗಳ ಪರೀಶಿಲಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post