ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಗೊಂಧಿ ಅಣೆಕಟ್ಟೆ ಪ್ರದೇಶವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಕಾಡಾ ಅಧ್ಯಕ್ಷ ಪವಿತ್ರ ರಾಮಯ್ಯ ಹೇಳಿದ್ದಾರೆ.
ಪ್ರಾಧಿಕಾರದ ವ್ಯಾಪ್ತಿಗೆ ಬರುವ ಹಿರಿಯೂರು ಜಿಲ್ಲಾ ಪಂಚಾಯತ್ ಗೊಂದಿ ಗ್ರಾಮದಲ್ಲಿ ಭದ್ರಾ ನದಿಗೆ ಅಡ್ಡಲಾಗಿ ನಿರ್ಮಾಣವಾಗಿರುವ ಗೊಂದಿ ಅಣೆಕಟ್ಟನ್ನು ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರೊಂದಿಗೆ, ಸದಸ್ಯರೊಂದಿಗೆ, ಸಂಬಂಧ ಪಟ್ಟ ಅಧಿಕಾರಿಗಳೊಂದಿಗೆ, ಗ್ರಾಮದ ರೈತರೊಂದಿಗೆ ವೀಕ್ಷಣೆ ಮಾಡಿ ಅವರು ಮಾತನಾಡಿದರು.

ಅಣೆಕಟ್ಟೆಯನ್ನು ಉನ್ನತೀಕರಿಸುವುದರಿಂದ ಸುತ್ತಲಿರುವ ಹನ್ನೊಂದು ನೀರು ಬಳಕೆದಾರರ ಸಹಕಾರ ಸಂಘಗಳಿಗೆ, ಸಾವಿರಾರು ರೈತರಿಗೆ ಅನುಕೂಲವಾಗುತ್ತದೆ. ಮುಖ್ಯಮಂತ್ರಿಗಳಿಗೆ, ಸಂಸದರಿಗೆ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಲಾಗುವುದು, ರೈತರ ಹಿತಾಸಕ್ತಿಯೇ ನನ್ನ ಮೊದಲ ಆದ್ಯತೆ ನಿಮ್ಮ ಮನವಿಯನ್ನು ನಾನು ಪುರಸ್ಕಿರಿಸುತ್ತೇನೆ ಎಂದು ಭರವಸೆ ನೀಡಿದರು.
ಗೊಂಧಿ ಅಣೆಕಟ್ಟು ಅಭಿವೃದ್ದಿಪಡಿಸುವುದರಿಂದ ಈ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಬಲ ನೀಡಿದಂತಾಗುತ್ತದೆ. ನೂರಾರು ಜನರ ನಿತ್ಯ ಜೀವನಕ್ಕೆ ಅನುಕೂಲವಾಗುತ್ತದೆ. ಜೊತೆಗೆ ಸ್ಥಳೀಯ ಆಡಳಿತಕ್ಕೆ, ರಾಜ್ಯ ಸರ್ಕಾರಕ್ಕೆ ಲಕ್ಷಾಂತರ ರೂಪಾಯಿ ಆದಾಯ ಕೂಡ ಬರುತ್ತದೆ. ಇದನ್ನು ಸರ್ಕಾರದ ಗಮನಕ್ಕೆ ತಂದು ಅಭಿವೃದ್ದಿಪಡಿಸುತ್ತೇನೆ ಎಂದು ಶಪಥ ಮಾಡಿದರು.

ಈ ಸಂದರ್ಭದಲ್ಲಿ ಕಾಡಾ ನಿರ್ದೇಶಕರಾದ ಷಡಾಕ್ಷರಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















