ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಸೊಸೈಟಿಯಲ್ಲಿ ಪಡಿತರ ಚೀಟಿದಾರರಿಗೆ ನೀಡುವ 50 ಕೆಜಿಯ 137 ಚೀಲ ಅಕ್ಕಿಯನ್ನು ಅಕ್ರಮವಾಗಿ ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಆರೋಪಿಯನ್ನು ಮಾಲು ಸಹಿತ ಹೊಸಮನೆ ಪೋಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ.
ಹೊಸಮನೆ ಸಂತೆ ಮೈದಾನದಲ್ಲಿನ ಮನೆಯೊಂದರಲ್ಲಿ ಸೊಸೈಟಿ ಅಕ್ಕಿಯನ್ನು ದಾಸ್ತಾನು ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಸಾಗಿಸಕುವ ಪ್ರಯತ್ನ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಹೊಸಮನೆ ಪೋಲಿಸರು ಕಾರ್ಯಾಚರಣೆ ಆರಂಭಿಸಿದ್ದರು.
ಸಬ್‌ಇನ್ಸ್‌ಪೆಕ್ಟರ್ ಕೆ.ಎಚ್. ಜಯಪ್ಪ ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಅಕ್ರಮವಾಗಿ ಅಕ್ಕಿ ಸಾಗಿಸುತ್ತಿದ್ದ ಲಾರಿಯನ್ನು ತಡೆದಿದ್ದಾರೆ. ಆರೋಪಿ ಸಂತೇ ಮೈದಾನ ವಾಸಿ ರಹೀಮಾ ಎಂಬುವನನ್ನು ಮತು ್ತ50 ಕೆಜಿ ತೂಕದ 137 ಚೀಲ ಅಕ್ಕಿಯ ಬೆಲೆ 1.70 ಲಕ್ಷ ರೂ ಅಕ್ಕಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಉಳಿದ ಮೂವರು ಆರೋಪಿಗಳಾದ ವೀರಾಪುರದ ಹಬೀಬ, ಹೊಸಮನೆಯ ಶರವಣ ಹಾಗೂ ಸಂತೋಷ್ ಎಂಬುವರು ಪರಾರಿಯಾಗಿದ್ದು ಅವರ ಪತ್ತೆಗೆ ಪೋಲಿಸರು ಕ್ರಮಕೈಗೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post