ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕ್ಷೇತ್ರದಲ್ಲಿ ಪಕ್ಷದ ಬಲವರ್ಧನೆ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಿಷ್ಪಕ್ಷಪಾತವಾಗಿ ಜನಸೇವೆಯಲ್ಲಿ ತೊಡಗಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಕರೆ ನೀಡಿದ್ದಾರೆ.
ತಾಲೂಕು ಮಟ್ಟದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಪಕ್ಷದ ಬಲವರ್ಧನೆ ಎಷ್ಟು ಮುಖ್ಯವೋ, ಸಮಗ್ರ ಅಭಿವೃದ್ಧಿಯೂ ಸಹ ಅಷ್ಟೇ ಮುಖ್ಯ. ಹೀಗಾಗಿ, ಯಾವುದೇ ರೀತಿಯ ರಾಗದ್ವೇಷವಿಲ್ಲದೇ ನಿಷ್ಪಕ್ಷಪಾತವಾಗಿ ಜನರ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ನಿಮ್ಮ ಮಗು ಬುದ್ದಿಶಾಲಿಯಾಗಿ ಹುಟ್ಟಬೇಕೆ? ಸದೃಢ ಮೈಕಟ್ಟು ಹೊಂದಿ ಕಾಂತಿಯುತವಾಗಬೇಕೆ? ಇಲ್ಲಿದೆ ಮಾರ್ಗ
ಇದೇ ವೇಳೆಯಲ್ಲಿ 18 ಕೋಟಿ ರೂ ವೆಚ್ಚದಲ್ಲಿ ಕೆರೆ ತುಂಬಿಸುವ ಯೋಜನೆ ಹಾಗೂ ಇನ್ನೂ ಸಮಗ್ರ ಅಭಿವೃದ್ಧಿಗಾಗಿ ಸರಿ ಸುಮಾರು 400 ಕೋಟಿ ರೂ ಸರ್ಕಾರದಿಂದ ಮಂಜೂರು ಮಾಡಿಸಿರುವ ಬಗ್ಗೆ ವಿವರಿಸಿದರು.
ಶಾಸಕರ ಕಾರ್ಯಕ್ಷಮತೆ ಪಂಚಾಯತಿ ವ್ಯಾಪ್ತಿಯಲ್ಲಿ ಹಕ್ಕುಪತ್ರ ವಿತರಣೆ, ಬೀದಿ ದೀಪ ಸಿಸಿ ರಸ್ತೆಗಳು ಹಾಗೂ ಡಾಂಬರೀಕರಣ ರಸ್ತೆಗಳ ನಿರ್ಮಾಣ, ಕುಡಿಯುವ ನೀರಿನ ಉತ್ತಮ ಪೂರೈಕೆ, ಶಾಸಕರ ಕೊಡುಗೆಗಳ ಕುರಿತು ಪಂಚಾಯತಿ ವ್ಯಾಪ್ತಿಯ ಸರ್ವ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಶ್ಲಾಘಿಸಿದರು.
ನಗರಸಭಾ ಮಾಜಿ ಅಧ್ಯಕ್ಷ ಬಿ.ಕೆ. ಮೋಹನ್, ಗ್ರಾಮ ಪಂಚಾಯತಿ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು, ಹಾಗೂ ಗ್ರಾಮಸ್ಥರು ಸಭೆಯಲ್ಲಿ ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.ne
Discussion about this post