ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಸಾರ್ವಜನಿಕ ಹಿತಾಸಕ್ತಿಯ ಮೂರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜನತಾದಳ(ಸಂಯುಕ್ತ) ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್. ಗೌಡ ತಾಲೂಕು ಕಚೇರಿ ಮುಂಭಾಗದಲ್ಲಿ ಹಗಲು ರಾತ್ರಿ ನಿರಂತರ ಪ್ರತಿಭಟನೆ ಆರಂಭಿಸಿದ್ದಾರೆ.
ಪ್ರತಿಭಟನೆ ಕುರಿತಂತೆ ಮಾತನಾಡಿದ ಅವರು, ತಾಲೂಕಿನಲ್ಲಿರುವ ಸಿಎಲ್ 2 ಮದ್ಯದ ಅಂಗಡಿ ಮತ್ತು ಎಂಎಸ್’ಐಎಲ್ ಅಂಗಡಿಗಳಲ್ಲಿ ಎಂಆರ್’ಪಿ ದರಕ್ಕಿಂತಲೂ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ. ಉಜ್ಜಿನೀಪುರ ಆನೆಕೊಪ್ಪದಲ್ಲಿರುವ ಎಂಎಸ್’ಐಎಲ್ ಮಳಿಗೆಯಿಂದ ಸಾರ್ವಜನಿಕರು ಹಾಗೂ ಮಹಿಳೆಯರಿಗೆ ತೊಂದರೆಯಾಗುತ್ತಿದೆ. ಇದನ್ನು ಸ್ಥಳಾಂತರ ಮಾಡಬೇಕು ಎಂದರು.
ಬಡ ಮಹಿಳೆಯರಿಂದ ಮೈಕ್ರೋ ಫೈನಾನ್ಸ್’ನವರು ಸಾಲದ ಹಣದ ಕಂತನ್ನು ಬಲವಂತವಾಗಿ ಕಟ್ಟಿಸಿಕೊಳ್ಳುತ್ತಿದ್ದಾರೆ. ಈ ಕುರಿತಂತೆ ಹಳೇ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ತಪ್ಪಿಸಬೇಕು ಎಂದು ಆಗ್ರಹಿಸಿದರು.
ಈ ಮೂರು ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಈ ಸಮಸ್ಯೆಗಳಿ ಪರಿಹಾರವಾಗುವವರೆಗೂ ಹಗಲು ರಾತ್ರಿ ಎನ್ನದೇ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದರು.
ಇನ್ನು, ಅಬಕಾರಿ ಅಧಿನಿಯಮಗಳನ್ನು ರಕ್ಷಣೆ ಮಾಡದ ಅಬಕಾರಿ ಇನ್ಸಪೆಕ್ಟರ್ ಧರ್ಮಪ್ಪ ಅವರನ್ನು ಕೂಡಲೇ ಅಮಾನತ್ತು ಮಾಡಬೇಕು ಎಂದು ಈ ಸಂದರ್ಭದಲ್ಲಿ ಅವರು ಆಗ್ರಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post