ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿರುವ ಮಣಿಪಾಲ್ ಆರೋಗ್ಯ ಕಾರ್ಡ್ ಶುಲ್ಕ ಸಣ್ಣದಾಗಿದ್ದು, ಪ್ರಯೋಜನ ಮಾತ್ರ ದೊಡ್ಡದಾಗಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮಾರುಕಟ್ಟೆ ವಿಭಾಗದ ಉಪ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.
ಸುದ್ಧಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಅವರು ನಮ್ಮ ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಯಶಸ್ವೀ 20 ವರ್ಷಗಳನ್ನು ಪೂರೈಸಿದ್ದೇವೆ ಎಂದು ತಿಳಿಸಲು ನನಗೆ ಅಪಾರ ಸಂತೋಷವಾಗುತ್ತಿದೆ ಎಂದರು.
20ನೇ ವರ್ಷದ ಅಂಗವಾಗಿ, ನಾವು ಕಾರ್ಡ್‌ಗಳನ್ನು ಸುಲಭವಾಗಿ ನೋಂದಾಯಿಸಲು, ಸರಳ ಹಾಗೂ ಪೂರ್ವ ಸಂಖ್ಯಾ ಮುದ್ರಿತ ಕಾರ್ಡ್ ಸ್ಮಾರ್ಟ್ ಕಾರ್ಡನ್ನು ಪರಿಚಯಿಸುತ್ತಿದ್ದೇವೆ ಮತ್ತು ಸಂಖ್ಯಾ ಮುದ್ರಿತ ಸ್ಮಾರ್ಟ್ ಕಾರ್ಡನ್ನು ಕಾರ್ಡುದಾರರಿಗೆ ಸ್ಥಳದಲ್ಲೇ ನೀಡಲಾಗುವುದು ಮತ್ತು ಸ್ಮಾರ್ಟ್ ಕಾರ್ಡನ್ನು ತಮ್ಮ ಪೋಕೆಟಗಳಲ್ಲಿ ಇಟ್ಟುಕೊಳ್ಳಬಹುದು ಎಂದರು.
ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವವನ್ನು ಪಡೆಯಬಹುದು ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿಗಳ ರೂಪದಲ್ಲಿ ಅವರ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ ಎಂದರು.
20ನೇ ವರ್ಷದ ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯು, ಒಂದು ವರ್ಷ ಮತ್ತು ಎರಡು ವರ್ಷದ ಯೋಜನೆಯಾಗಿ ಲಭ್ಯವಿದ್ದು, ಈ ವರ್ಷದಿಂದ ಕಟೀಲಿನ ದುರ್ಗಾ ಸಂಜೀವನಿ ಮಣಿಪಾಲ್ ಆಸ್ಪತ್ರೆಯನ್ನು ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಸೇರ್ಪಡೆಗೊಳಿಸಲಾಗಿದೆ. ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು ಮಣಿಪಾಲ, ಉಡುಪಿ, ಕಾರ್ಕಳ, ಮಂಗಳೂರು, ಗೋವಾ ಮತ್ತು ಕಟೀಲಿನಲ್ಲಿರುವ ಆಸ್ಪತ್ರೆಗಳಲ್ಲಿ ವೈದ್ಯಕೀಯ ಮತ್ತು ದಂತ ಸೇವೆಗಳ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ₹ 250/-, ಕುಟುಂಬಕ್ಕೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ₹ 500/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ) ₹ 650/-. ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ₹ 400/-, ಕುಟುಂಬಕ್ಕೆ ₹ 700/- ಮತ್ತು ಕುಟುಂಬ ಪ್ಲಸ್ ಯೋಜನೆಗೆ ₹ 850/- ಇರುತ್ತದೆ. ಮಣಿಪಾಲ ಆರೋಗ್ಯ ಕಾರ್ಡನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು ಎಂದರು.
ಪತ್ರಿಕಾಗೋಷ್ಟಿಯಲ್ಲಿ ಮಾರುಕಟ್ಟೆ ವಿಭಾಗದ ಪ್ರತಿನಿಧಿ ಅನಿಲ್ ನಾಯ್ಕ ಮತ್ತು ಮಣಿಪಾಲ ಆರೋಗ್ಯ ಕಾರ್ಡ್’ನ ಈ ಭಾಗದ ಮುಖ್ಯ ಸಂಯೋಜಕ ಎ.ಎನ್. ವಿಜೇಂದ್ರ ರಾವ್, ಭದ್ರಾವತಿ ವಿಪ್ರ ಸೌಹಾರ್ದ ಸಹಕಾರಿಯ ಶಶಿಕುಮಾರ್ ಉಪಸ್ಥಿತರಿದ್ದರು.
ಏನೆಲ್ಲಾ ಸೌಲಭ್ಯಗಳಿವೆ?
- ವೈದ್ಯರ ಸಮಾಲೋಚನೆ ಶೇ.50ರಷ್ಟು ರಿಯಾಯಿತಿ
- ಪ್ರಯೋಗಾಲಯ ಪರೀಕ್ಷೆ ಶೇ.30ರಷ್ಟು ರಿಯಾಯಿತಿ
- ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ.25ರಷ್ಟು ರಿಯಾಯಿತಿ
- ಸಿ ಟಿ, ಎಂ ಆರ್ ಐ, ಅಲ್ಟ್ರಾಸೌಂಡ್, ಶೇ.20ರಷ್ಟು ರಿಯಾಯಿತಿ
- ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20ರಷ್ಟು ರಿಯಾಯಿತಿ
- ಔಷಧಾಲಯಗಳಲ್ಲಿ ಶೇ.12ರವರೆಗೆ ರಿಯಾಯಿತಿ
2020ರ ನೋಂದಾವಣಿಗಾಗಿ ಅರ್ಜಿಗಳು ಕೆಳಕಂಡ ಅಧಿಕೃತ ಪ್ರತಿನಿಧಿಗಳ ಬಳಿ ಲಭ್ಯವಿದೆ:
ಭದ್ರಾವತಿ: ವಿಪ್ರ ಸೌಹರ್ದ: 9448730994/ 9972720461, ಎಂ ಜಿ ಸುರೇಶ್: 9845681363, ಡಿ. ಶಬರಿವಾಸನ್: 9035616188, ವೆಂಕಟಸುಬ್ರಾಯುಡು: 7848833568, ಅಗರದಹಳ್ಳಿ: ವೆಂಕಟೇಶ್ ಎ ಜಿ: 8971141292. ಶಿವಮೊಗ್ಗ: ಎ.ಎನ್. ವಿಜೇಂದ್ರ ರಾವ್: 9448790127
ಮಣಿಪಾಲ ಆರೋಗ್ಯ ಕಾರ್ಡಿನ ಹೆಚ್ಚಿನ ಮಾಹಿತಿಗಾಗಿ www.khmanipal.comಗೆ ಭೇಟಿ ನೀಡಬಹುದಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post