ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕಾಗದ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಂದೂರಿನಿಂದ ಕೆಂಪೇಗೌಡ ನಗರ ಕಡೆ ಹೋಗುವ ಬೈಪಾಸ್ ರಸ್ತೆಯ ಹತ್ತಿರ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐದು ಮಂದಿಯನ್ನು ಪೊಲೀಸರು ಬಂಧಿಸಿ 31,500 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಜನರು ಗುಂಪು ಸೇರಿಕೊಂಡು ಅಕ್ರಮವಾಗಿ ಇಸ್ಪಿಟು ಜೂಜಾಟ ಆಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿವೈಎಸ್’ಪಿ ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ, ಗ್ರಾಮಾಂತರ ಪೊಲೀಸ್ ನಿರೀಕ್ಷಕ ಮಂಜುನಾಥ್, ಸಿಬ್ಬಂದಿಗಳಾದ ಬಸವರಾಜ ಸಿಪಿಸಿ, ಮಧು ಸಿಪಿಸಿ, ಮಂಜುನಾಥ್ ಸಿಪಿಸಿ, ರಾಜಣ್ಣ ಎಎಚ್’ಸಿ ಅವರನ್ನೊಳಗೊಂಡ ತಂಡವು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
ಆರೋಪಿತರ ವಿರುದ್ಧ ಅಕ್ರಮ ಜೂಜಾಟ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಕೆ.ಎಂ ಶಾಂತರಾಜು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post